ಮಹಿಳಾ ಸುರಕ್ಷತೆಗಾಗಿ 'ಪಿಂಕ್ ಸಾರಥಿ' ಜೀಪುಗಳಿಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ “ನಿರ್ಭಯ ಯೋಜನೆ”ಯಡಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಖರೀದಿಸಲಾಗಿರುವ ...
ಪಿಂಕ್ ಸಾರಥಿ ಉದ್ಘಾಟನೆ
ಪಿಂಕ್ ಸಾರಥಿ ಉದ್ಘಾಟನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ “ನಿರ್ಭಯ ಯೋಜನೆ”ಯಡಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗಾಗಿ ಖರೀದಿಸಲಾಗಿರುವ “ಪಿಂಕ್ ಸಾರಥಿ” ಜೀಪುಗಳನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸೌಧದ ಮುಂಭಾಗ ಇಂದು ಲೋಕಾರ್ಪಣೆ ಮಾಡಿದರು.
ಇದೇ ವೇಳೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್ ಮಾದರಿಯ ಉಚಿತ ವಿದ್ಯಾರ್ಥಿ ಪಾಸುಗಳನ್ನು ಮುಖ್ಯಮಂತ್ರಿ ವಿತರಿಸಿದರು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ಸಚಿವ ಪುಟ್ಟರಂಗಶೆಟ್ಡಿ, ಬಿಎಂಟಿಸಿ ಅಧ್ಯಕ್ಷ ಎನ್.ಎ.ಹ್ಯಾರಿಸ್, ವ್ಯವಸ್ಥಾಪಕ ನಿರ್ದೇಶಕ ಎನ್.ವಿ.ಪ್ರಸಾದ್, ನಿರ್ದೇಶಕ ಅನುಪಮ್ ಅಗರವಾಲ್ ಮತ್ತಿತರರು ಉಪಸ್ಥಿತರಿದ್ದರು.
ಯೋಜನೆಗಾಗಿ 56.7 ಕೋಟಿ ಅನುದಾನ ನೀಡಲಾಗಿದೆ, ಇದರಲ್ಲಿ 25 ಮಹೀಂದ್ರಾ ಬೊಲೆರೊ ವಾಹನಗಳನ್ನು ಖರೀದಿಸಿದ್ದು, ‘ಪಿಂಕ್ ಸಾರಥಿ’ ಎಂದು ಹೆಸರಿಡಲಾಗಿದೆ. ಈ ವಾಹನಗಳಲ್ಲಿ ಜಿಪಿಎಸ್ ನಿರ್ವಹಣೆ ಹಾಗೂ ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com