ಗಂಭೀರವಾಗಿ ಗಾಯಗೊಂಡಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಸಂಸದ ಉಮೇಶ್ ಜಾಧವ್!

ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ...

Published: 07th June 2019 12:00 PM  |   Last Updated: 07th June 2019 08:49 AM   |  A+A-


Umesh Jadhav

ಉಮೇಶ್ ಜಾಧವ್

Posted By : VS VS
Source : Online Desk
ಯಾದಗಿರಿ: ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ.

ಟೀಕು ರಾಠೋಡ್ ಮತ್ತು ನರೇಂದ್ರ ಎಂಬುವರು ಅರಕೇರಾ ಗ್ರಾಮದ ಬಳಿ ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ಮಲಗಿದ್ದರು. ಈ ವೇಳೆ ಈ ಮಾರ್ಗದಲ್ಲಿ ಸಾಗುತ್ತಿದ್ದ ಸಂಸದ ಉಮೇಶ್ ಜಾಧವ್ ಕೂಡಲೇ ಕಾರು ನಿಲ್ಲಿಸಿ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಾಪಸ್ ಯಾದಗಿರಿಗೆ ಆಗಮಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಗಾಯಾಳುಗಳಿಗೆ ಉಮೇಶ್ ಜಾಧವ್ ಅವರು ಸ್ಥಳದಲ್ಲೇ ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ. ಇನ್ನು ಸಂಸದರ ಮಾನವೀಯತೆಯನ್ನು ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp