ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ಯವ್ಯ: ಸ್ಥಳ ಸಜ್ಜು ಪಡಿಸಲು ತೆರಳಿದ ಅಧಿಕಾರಿಗಳು

ಜೂನ್ 21 ರಿಂದ ಆರಂಭವಾಗಲಿರುವ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ದತೆ ನಡೆಸುತ್ತಿದ್ದಾರೆ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಜೂನ್ 21 ರಿಂದ ಆರಂಭವಾಗಲಿರುವ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ದತೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ತಳಮಟ್ಟದ ಸಮಸ್ಯೆಗಳನ್ನು ಕಂಡು ಹಿಡಿದು ಅವುಗಳಿಗೆ ಪರಿಹಾರ ಕಂಡು ಹಿಡಿಯುತ್ತಿದ್ದಾರೆ
ತಾವು ಗ್ರಾಮವಾಸ್ತವ್ಯ ಮಾಡುವ ಶಾಲೆಯನ್ನು ಮಾತ್ರ ಅಭಿವೃದ್ಧಿ ಪಡಿಸದೇ ಅಕ್ಕ ಪಕ್ಕದ ಗ್ರಾಮಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಒತ್ತು ನೀಡುವಂತೆ ಸಿಎಂ ಕುಮಾರಸ್ವಾಮಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಾವು ವಾಸ್ತವ್ಯ ಹೂಡುವ ಸರ್ಕಾರಿ ಶಾಲೆಯಲ್ಲಿ ಶಾಶ್ವತವಾಗಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವಂತೆ ಸೂಚಿಸಿದ್ದಾರೆ, ಹೀಗಾಗಿ ಸಿಎಂ ವಾಸ್ತವ್ಯ ಹೂಡುವ ಸರ್ಕಾರಿ ಶಾಲೆಯಲ್ಲಿ  ಎಲ್ಲಾ ರೀತಿಯ ಸಿದ್ದತೆ ಮಾಡಲು ತೆರಳಿದ್ದಾರೆ. 
ನಾನು ಆಯ್ಕೆ ಮಾಡಿರುವ ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಹೀಗಾಗಿ ಅಲ್ಲಿನ ಸಮಸ್ಯೆಗಳನ್ನು  ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ಕೆಲಸಗಳನ್ನು ಮಾಡಿಸಿರೊಳ್ಳಲು ರಾಜ್ಯದ ಹಲವು ಕಡೆಗಳಿಂದ ಜನರು ಬೆಂಗಳೂರಿಗೆ ಆಗಮಿಸಬೇಕಾಗುತ್ತದೆ, ಹೀಗಾಗಿ ನಾನೇ ಸ್ವತಃ ಅಲ್ಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುತ್ತೇನೆ, ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರೂ ಹಾಜರಿರುತ್ತಾರೆ. 
ಎಲ್ಲರೂ ಒಟ್ಟಾಗಿ ಕೂತು ಅಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಕೂಡ ಹಾಜರಿರುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com