ಬೀದರ್ ನಲ್ಲಿ 26 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಆರಂಭ

ಸರ್ಕಾರಿ ಶಾಲೆಗಳಿಗೆ ಹೊಸ ಸ್ವರೂಪ ನೀಡಲು ಮತ್ತು ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ತಂದಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೀದರ್: ಸರ್ಕಾರಿ ಶಾಲೆಗಳಿಗೆ ಹೊಸ ಸ್ವರೂಪ ನೀಡಲು ಮತ್ತು ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ತಂದಿರುವ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವ ಯೋಜನೆಗೆ ಹೈದರಾಬಾದ್ ಕರ್ನಾಟಕದ ಬೀದರ್ ನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಬೀದರ್ ನಲ್ಲಿ 26 ಎಲ್ ಕೆಜಿ, ಯುಕೆಜಿ ಆಂಗ್ಲ ಮಾಧ್ಯಮ ಪೂರ್ವಪ್ರಾಥಮಿಕ ಶಾಲೆಗಳು ಪ್ರಾರಂಭಿಸಲು ಎಲ್ಲಾ ಸಿದ್ಧತೆ ನಡೆದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳ ಆರಂಭಕ್ಕೆ ಸಿದ್ಧತೆ ನಡೆಸಿದ್ದಾರೆ. ಬೀದರ್ ತಾಲೂಕಿನಲ್ಲಿ 7 , ಭಾಲ್ಕಿ 3, ಔರಾದ್ 4, ಬಸವಕಲ್ಯಾಣ ತಾಲೂಕಿನಲ್ಲಿ 5, ಹುಮನಾಬಾದ್ ನಲ್ಲಿ 7 ಸೇರಿದಂತೆ ಒಟ್ಟು 26 ಎಲ್ ಕೆ ಜಿ ಯೂಕೆಜಿ ಶಾಲೆಗಳು ಪ್ರಾರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಚಂದ್ರಕಾಂತ ತಿಳಿಸಿದ್ದಾರೆ.
ಈಗಾಗಲೇ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಲ್ ಕೆ ಜಿ ಯೂಕೆಜಿ ಪ್ರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದ್ದು, ಶಾಲೆಯಲ್ಲಿ ಇದಕ್ಕಾಗಿ ಪ್ರತ್ಯೇಕ ಕೊಠಡಿಗಳಿಗೆ ಹೊಸ ಸ್ವರೂಪ ನೀಡಲಾಗತ್ತಿದೆ ಎಂದು ಶಾಲೆಯ ಪ್ರಾಂಶುಪಾಲ ಚಂದ್ರಕಾಂತ ಶಾಬಾದಿಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com