ಐಎಂಎ ವಂಚನೆ ಪ್ರಕರಣ: ಸಂಸ್ಥೆಯ 7 ನಿರ್ದೇಶಕರ ಬಂಧನ, ಕಿಂಗ್ ಪಿನ್ ಖಾನ್ ನಾಪತ್ತೆ!

ಹೂಡಿಕೆದಾರರಿಗೆ ಸಾವಿರಾರು ಕೋಟಿ ವಂಚಿಸಿರುವ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಸಂಸ್ಥೆಯ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೂಡಿಕೆದಾರರಿಗೆ ಸಾವಿರಾರು ಕೋಟಿ ವಂಚಿಸಿರುವ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಸಂಸ್ಥೆಯ 7 ನಿರ್ದೇಶಕರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಅತ್ತ ಹಣ ಕಳೆದುಕೊಂಡ ಹೂಡಿಕೆದಾರರ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬುಧವಾರ ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿಯ ಏಳು ನಿರ್ದೇಶಕರನ್ನು ಬಂಧಿಸಿದ್ದಾರೆ. ಕಂಪನಿಯ ನಿರ್ದೇಶಕರಾದ ನಿಜಾಮುದ್ದೀನ್ ಖಾನ್, ನಾಸೀರ್ ಹುಸೇನ್, ನವೀದ್ ಅಹ್ಮದ್, ಅರ್ಷದ್‌ ಖಾನ್, ಅನ್ಸರ್ ಪಾಷಾ, ವಾಸೀಂ, ದಾದಾಪೀರ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರೆಲ್ಲರನ್ನೂ ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಆದರೆ ಪ್ರಕರಣದ ಪ್ರಮುಖ ಕಿಂಗ್ ಪಿನ್ ಮನ್ಸೂರ್ ಖಾನ್ ಇನ್ನೂ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಆದರೆ ನಿನ್ನೆಯ ಬಂಧನದ ವೇಳೆ ಪೊಲೀಸರು ಕಂಪನಿ ಮಾಲೀಕ ಮಹಮದ್ ಮನ್ಸೂರ್‌ ಖಾನ್ ಬಳಸುತ್ತಿದ್ದ ರೇಂಜ್ ರೋವರ್ ಹಾಗೂ ಜಾಗ್ವಾರ್ ಕಾರುಗಳನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಡಿಐಜಿ ಬಿ.ಆರ್. ರವಿಕಾಂತೇಗೌಡ ಅವರನ್ನು ಮುಖ್ಯಸ್ಥರನ್ನಾಗಿ ಸರ್ಕಾರ ನೇಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com