ಔರಾದ್ಕರ್ ವರದಿ ಅನುಷ್ಠಾನಕ್ಕೆ ಆಗ್ರಹ: ಪೊಲೀಸ್ ವೇಷ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ ಶಿಫಾರಸ್ಸು ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪೊಲೀಸ್ ವೇಷಧರಿಸಿ ಪ್ರತಿಭಟನೆ ನಡೆಸಿದರು.
ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್
ಬೆಂಗಳೂರು: ಪೊಲೀಸರ ವೇತನವನ್ನು ಶೇಕಡಾ 30 ರಷ್ಟು ಏರಿಕೆ ಮಾಡುವಂತೆ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ ಶಿಫಾರಸ್ಸು ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪೊಲೀಸ್ ವೇಷಧರಿಸಿ ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಪೊಲೀಸ್ ಸಿಬ್ಬಂದಿಗೆ  ಶೇಕಡಾ 30 ರಿಂದ 35 ರಷ್ಟು ವೇತನ ಪರಿಷ್ಕರಣೆ ಮಾಡಬೇಕೆಂದು  ಔರಾದ್ಕರ್ ನೇತೃತ್ವದ ಸಮಿತಿ 2016ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ವರದಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು. 
 ಸರ್ಕಾರ  ಜುಲೈ 13ರೊಳಗೆ ಔರಾದ್ಕರ್ ವರದಿ ಅನುಷ್ಠಾನಗೊಳಿಸಬೇಕು , ಇಲ್ಲದಿದ್ದರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com