ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಚಾಲನೆ

ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ...

Published: 14th June 2019 12:00 PM  |   Last Updated: 14th June 2019 01:57 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : SUD
Source : UNI
ಬೆಂಗಳೂರು: ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಯಾರೂ ಭಾವಿಸಬಾರದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ಟೆಟ್‌ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ‌ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾತೃಭಾಷೆಯನ್ನು ರಕ್ಷಣೆ ಮಾಡುವ ಜೊತೆ ಜೊತೆಗೆ ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ತೆರೆಯಲಾಗಿದೆ. ಪ್ರಸ್ತುತ ಸ್ಮರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಅವಶ್ಯಕ.‌ ಸರಕಾರಿ ಶಾಲೆ ಬಗ್ಗೆ ನಿರ್ಲಕ್ಷ್ಯ ಬೇಡ. ನಾವೆಲ್ಲರೂ ಸಹ ಸರಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದಿದ್ದು. ಗೊಲ್ಲಹಳ್ಳಿ ಎಂಬ ಹಳ್ಳಿಯ ಸರಕಾರಿ ಶಾಲೆಯಲ್ಲಿ ಓದಿದ ನಾನು ಆಸ್ಟ್ರೇಲಿಯಾದಲ್ಲಿ ಡಾಕ್ಟರೇಟ್‌ ಮಾಡಿದ್ದೇನೆ.‌ ಸರಕಾರಿ ಶಾಲೆ ಎಂದೂ ನಿರ್ಲಕ್ಷ್ಯ ಆಗಬಾರದು ಎಂದರು. 

ಇಡೀ ದೇಶದಲ್ಲಿ ಕರ್ನಾಟಕ ಶಿಕ್ಷಣದಲ್ಲಿ ಮಾದರಿ ರಾಜ್ಯ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ 1,200 ಕೋಟಿ ರೂಪಾಯಿಗಳನ್ನು ಸರಕಾರಿ ಶಾಲೆಗಳ ಆಧುನೀಕರಣಕ್ಕೆ ಮೀಸಲಿಟ್ಟಿದೆ. ನಮ್ಮ‌ಸರಕಾರದ ಆದ್ಯತೆ ಶಿಕ್ಷಣ ಕ್ಷೇತ್ರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ರೋಷನ್‌ ಬೇಗ್‌ ಇತರರು ಉಪಸ್ಥಿತರಿದ್ದರು.
Stay up to date on all the latest ರಾಜ್ಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp