ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಕೊಲೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಹತ್ಯೆಯಾಗಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 31 ವರ್ಷದ ವ್ಯಕ್ತಿಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.

Published: 18th June 2019 12:00 PM  |   Last Updated: 18th June 2019 09:36 AM   |  A+A-


Bengaluru: 31-year-old man murdered by three bike-borne assailants in Malleshwaram early morning today; case registered

ಸಾಂದರ್ಭಿಕ ಚಿತ್ರ

Posted By : SVN SVN
Source : Online Desk
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಹತ್ಯೆಯಾಗಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 31 ವರ್ಷದ ವ್ಯಕ್ತಿಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದ್ದು, ಮೃತ ವ್ಯಕ್ತಿಯನ್ನು 31 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಗಣೇಶ್ ಮೂಲತಃ ಬೆಂಗಳೂರಿನವರೇ ಆಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು, ಕಳೆದ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರ ಜೊತೆ ಜಗಳ ಮಾಡಿಕೊಂಡಿದ್ದರು. ಅವರೇ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿದೆ. ರಾತ್ರಿ ಫುಟ್‌ಪಾತ್ ಮೇಲೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಗಣೇಶ್ ನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಜವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp