ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಮನೆಗೆ ಸಿಎಂ ಭೇಟಿ: ಮಕ್ಕಳಿಗೆ ಸರ್ಕಾರಿ ಕೆಲಸದ ಭರವಸೆ

ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆ.ಆರ್ ಪೇಟೆ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ...

Published: 18th June 2019 12:00 PM  |   Last Updated: 18th June 2019 01:26 AM   |  A+A-


H.D KumaraSwamy Visited Farmer suresh Home

ಮೃತ ರೈತನ ಮನೆಗೆ ಸಿಎಂ ಕುಮಾರಸ್ವಾಮಿ ಭೇಟಿ

Posted By : SD SD
Source : Online Desk
ಮಂಡ್ಯ: ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆ.ಆರ್ ಪೇಟೆ ತಾಲೂಕಿನ ಅಘಲಯ ಗ್ರಾಮದ ರೈತ ಸುರೇಶ್‌ ನಿವಾಸಕ್ಕೆ ಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದರು, ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 

5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‌ಅನ್ನು ಕುಟುಂಬಸ್ಥರಿಗೆ ನೀಡಿದರು. ಬರಪೀಡಿತ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದ 50 ವರ್ಷದ ರೈತ ಸುರೇಶ್‌ ತಮ್ಮ ಜಮೀನಿನ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸುಮಾರು ಎರಡೂವರೆ ಎಕರೆ ಜಮೀನು ಮತ್ತು ತೋಟ ಹೊಂದಿದ್ದ ಸುರೇಶ್‌ ತೋಟದ ಅಭಿವೃದ್ಧಿಗಾಗಿ ಅಘಲಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪತ್ನಿ ಜಯಶೀಲ ಹೆಸರಿನಲ್ಲಿ ಸಾಲ ಪಡೆದಿದ್ದರು. ಅಲ್ಲದೆ ಬೇಸಾಯಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದರೆನ್ನ ಲಾಗಿದೆ. ಮಳೆ ಇಲ್ಲದೆ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಗ್ರಾಮದ ಕೆರೆ ತುಂಬಿರಲಿಲ್ಲ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇದರಿಂದ ತೋಟದಲ್ಲಿನ ತೆಂಗು, ಅಡಕೆ ಮರಗಳು ಒಣಗುತ್ತಿದ್ದವು. ಇದನ್ನು ನೋಡಲಾಗದೇ ತನ್ನಮೊಬೈಲ್‌ನಲ್ಲಿ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp