ಐಎಂಎ ವಂಚನೆ ಪ್ರಕರಣ: ಕರ್ನಾಟಕ ಹೈಕೋರ್ಟ್ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಕೆ

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂದು ಕೋರಿ ಅರ್ಜಿಯೊಂದು ಸಲ್ಲಿಕೆಯಾಗಿದೆ.
ವಕೀಲ ಮುಯೀಜ್ ಅಹ್ಮದ್ ಖಾನ್ ಎಂಬುವವರು ಈ ಅರ್ಜಿ ಸಲ್ಲಿಕೆ ಮಾಡಿದ್ದು, ತಮ್ಮ ಅರ್ಜಿಯಲ್ಲಿ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಮಧ್ಯ ಪ್ರವೇಶ ಮಾಡಿ ಪ್ರಕರಣದ ತುರ್ತು ತನಿಖೆ ನಡೆಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.
ಅಲ್ಲದೆ ಹೂಡಿಕೆದಾರರಿಗೆ ವಂಚನೆ ಮಾಡಿರುವ ಐಎಂಎ ಕಂಪನಿ ಮತ್ತು ಅದರ ನಿರ್ದೇಶಕ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಅಲ್ಲದೆ ಪ್ರಸ್ತುತ ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆ ಮೇಲೆ ತಮಗೆ ನಂಬಿಕೆ ಇಲ್ಲ. ಪ್ರಕರಣದಲ್ಲಿ ಹಿರಿಯ ರಾಜಕಾರಣಿಗಳು, ಅಧಿಕಾರಿಗಳ ಹೆಸರು ತಳುಕು ಹಾಕಿಕೊಂಡಿದೆ. ಹೀಗಾಗಿ ಕೇಂದ್ರೀಯ ತನಿಖಾ ಸಂಸ್ಥೆಯಾದ ಸಿಬಿಐಗೆ ತನಿಖೆಯ ಜವಾಬ್ದಾರಿ ವಹಿಸಬೇಕೂ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 
ಅಲ್ಲದೆ ಅರ್ಜಿಯಲ್ಲಿ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಾಂಜಿ ಹಗರಣ ಇದಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com