ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ, ಸಿಬ್ಬಂದಿ ಭದ್ರತೆಗೆ ಪೊಲೀಸ್ ಔಟ್ ಪೋಸ್ಟ್ ಸ್ಥಾಪನೆಗೆ ಸರ್ಕಾರ ಮುಂದು

ವೈದ್ಯರ ಮೇಲೆ ಪದೇ ಪದೇ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ವೈದ್ಯರ ಮೇಲೆ ಪದೇ ಪದೇ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಭದ್ರತೆ ಹೆಚ್ಚಿಸಲು ದೇಶಾದ್ಯಂತ ಬೇಡಿಕೆಗಳು ಹೆಚ್ಚಾಗುತ್ತಿದ್ದು ಕರ್ನಾಟಕ ರಾಜ್ಯ ಸರ್ಕಾರ ತನ್ನ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ. 
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಪೊಲೀಸ್ ಹೊರಠಾಣೆಗಳ ಸ್ಥಾಪನೆಗೆ ಮುಂದಾಗಿದ್ದು ಈಗಿರುವ ಪೊಲೀಸ್ ಪಡೆಯಲ್ಲಿ ಅಗತ್ಯ ಸಿಬ್ಬಂದಿಯನ್ನು ದಿನದ 24 ಗಂಟೆಗಳ ಕಾಲ ನೇಮಿಸಲು ಮುಂದಾಗಿದೆ.
ಸರ್ಕಾರಿ ವೈದ್ಯರ ಮೇಲೆ ಹಲ್ಲೆ, ಬೆದರಿಕೆ ಯತ್ನಗಳು ನಿರಂತರವಾಗಿ ಮುಂದುವರಿಯುತ್ತಿರುವಾಗ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ್ ಶೆಟ್ಟಿ ದಾಖಲಿಸಿದ ಸ್ವಯಂಪ್ರೇರಿತ ಅರ್ಜಿಯನ್ನು ಆಧರಿಸಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. 
ಇತ್ತೀಚೆಗೆ ಗೃಹ ಇಲಾಖೆ ಲೋಕಾಯುಕ್ತಕ್ಕೆ ಸಲ್ಲಿಸಿದ ಮಾಹಿತಿ ಪ್ರಕಾರ ಪೊಲೀಸ್ ಹೊರಠಾಣೆಗಳ ನಿಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ 5 ಪ್ರಮುಖ ಆಸ್ಪತ್ರೆಗಳು ಸೇರಿದಂತೆ ರಾಜ್ಯದ 33 ಕಂದಾಯ ಜಿಲ್ಲೆಗಳ ಪ್ರಮುಖ ಆಸ್ಪತ್ರೆಗಳಲ್ಲಿ ಪೊಲೀಸ್ ಹೊರಠಾಣೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com