ಸುರಪುರ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ...

Published: 19th June 2019 12:00 PM  |   Last Updated: 19th June 2019 07:49 AM   |  A+A-


Unable to repay loan, farmer commits suicide in Yadgir District

ಸಾಂದರ್ಭಿಕ ಚಿತ್ರ

Posted By : LSB LSB
Source : UNI
ಯಾದಗಿರಿ: ಸಾಲಭಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿ ನಡೆದಿದೆ.

ರೈತ ಮಲ್ಲಣ್ಣ ಸಜ್ಜನ್ (50) ಮೃತ ದುರ್ದೈವಿ. ಇವರು ಮೂಲತಃ ಹುಣಸಗಿ ತಾಲೂಕಿನ ಕನ್ನಳ್ಳಿ ಗ್ರಾಮದವರಾಗಿದ್ದರು. 1 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಇವರಿಗೆ ಬ್ಯಾಂಕ್ ಹಾಗೂ ಕೈಸಾಲ ಸೇರಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಈ ಕುರಿತು ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp