ಜಿಂದಾಲ್ ಸಚಿವ ಸಂಪುಟ ಉಪ ಸಮಿತಿಗೆ ಡಾ. ಜಿ.ಪರಮೇಶ್ವರ್ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ?

ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ಪರಭಾರೆ ಮಾಡದ ಪ್ರಕರಣದ ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ  ಭೂಮಿ ಪರಭಾರೆ ಮಾಡದ ಪ್ರಕರಣದ  ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಜಿಂದಾಲ್ ಸ್ಟೀಲ್ ಕಂಪನಿಗೆ 3667 ಎಕರೆ ಜಮೀನು ಪರಭಾರೆ ಮಾಡಿದ ಪ್ರಕರಣವನ್ನು ಮರು ಪರಿಶೀಲನೆಗಾಗಿ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಸಂಪುಟ ಸಭೆ ವಹಿಸಿತ್ತು. ಈ ಸಂಪುಟ ಉಪ ಸಮಿತಿಗೆ ಸಿಎಂ ಕುಮಾರಸ್ವಾಮಿ ಅವರು ಡಾ. ಪರಮೇಶ್ವರ್ ಅವರನ್ನೇ ಅಧ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಖ್ಯಮಂತ್ರಿ ಕುಮರಸ್ವಾಮಿ ಅಳೆದೂ ತೂಗಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರನ್ನೆ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಮೇಶ್ವರ್ ಮುಖ್ಯಮಂತ್ರಿ ಎಚ್ ಡಿಕೆಗೆ ಪರಮಾಪ್ತರಾಗಿದ್ದು,ಅತ್ತ ಸಚಿವ ಡಿಕೆ ಶಿವಕುಮಾರ್ ಅವರಿಗೂ ಆಪ್ತರು ಎನ್ನಲಾಗಿದೆ. ಜೊತೆಗೆ ಯಾರನ್ನೂ ವಿರೋಧ ಕಟ್ಟಿಕೊಳ್ಳುವ ಜಾಯಮಾನದವರಲ್ಲ.ಹೀಗಾಗಿ ಪರಮೇಶ್ವರ್ ತಲೆಗೆ ವಿವಾದಿತ ಜಿಂದಾಲ್ ಜವಾಬ್ದಾರಿಯನ್ನು ಹೊರಿಸಲು ಕುಮಾರಸ್ವಾಮಿ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ. 
ಒಂದು ವೇಳೆ ಸಂಪುಟ ಉಪ ಸಮಿತಿ ಜಿಂದಾಲ್ ಭೂಮಿ ಪರಭಾರೆ ಬಗ್ಗೆ ಏನೇ ತೀರ್ಮಾನ ಕೈಗೊಂಡರೂ ಅದು ಕಾಂಗ್ರೆಸ್ ಪಕ್ಷದ ಬುಡಕ್ಕೆ ಬರಲಿದ್ದು ತಮಗಾಗಲೀ ಅಥವಾ ತಮ್ಮ ಪಕ್ಷಕ್ಕಾಗಲೀ ಯಾವುದೇ ಸಮಸ್ಯೆ ಇಲ್ಲ ಎಂಬುದು ಕುಮಾರಸ್ವಾಮಿ ಲೆಕ್ಕಾಚಾರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com