
ಬೆಂಗಳೂರಿನ ಬಿಜೆಪಿ ಕಚೇರಿಯ ಎದುರು ಯೋಗಭ್ಯಾಸದಲ್ಲಿ ನಿರತ ಬಿ ಎಸ್ ಯಡಿಯೂರಪ್ಪ
Source : Online Desk
ಬೆಂಗಳೂರು: 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶುಕ್ರವಾರ ರಾಜ್ಯದಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಎಲ್ಲೆಡೆ ಯೋಗ ಪ್ರದರ್ಶನ ಗಮನ ಸೆಳೆಯಿತು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಧಾನ ಸಮಾರಂಭ ನಡೆಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಯೋಗ ಪ್ರದರ್ಶಿಸಿದರು.
ಯೋಗ ದಿನಾಚರಣೆಯ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ನಂತರ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಶಾಲಾ ಮಕ್ಕಳೊಂದಿಗೆ ಯಡಿಯೂರಪ್ಪ ಅವರು ಸ್ವತಃ ಯೋಗಾಭ್ಯಾಸ ಮಾಡಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವೈದ್ಯರಾದ ಡಾ.ಆನಂದ್ ಧೋತಿಹಾಳ್ ಅತಿಥಿಗಳಾಗಿ ಭಾಗವಹಿಸಿದ್ದರು.
Stay up to date on all the latest ರಾಜ್ಯ news