ಮಂಡ್ಯ ನಾಲೆಗಳಿಗೆ ಕೆಆರ್ ಎಸ್ ನಿಂದ 2 ಟಿಎಂಸಿ ನೀರು ಬಿಡುಗಡೆಗೆ ಆಗ್ರಹಿಸಿ ಸದಾನಂದಗೌಡ ಪತ್ರ

ಮಂಡ್ಯ ರೈತರ ಬೆಳೆದು ನಿಂತ ಬೆಳೆಗಳನ್ನು ಉಳಿಸಿಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಡಿವಿ ಸದಾನಂದಗೌಡ ಹಾಗೂ ಸುಮಲತಾ
ಡಿವಿ ಸದಾನಂದಗೌಡ ಹಾಗೂ ಸುಮಲತಾ
ನವದೆಹಲಿ: ಮಂಡ್ಯ ರೈತರ ಬೆಳೆದು ನಿಂತ ಬೆಳೆಗಳನ್ನು ಉಳಿಸಿಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಡ್ಯ ಜಿಲ್ಲೆಯ ರೈತರು ನೀರಿಲ್ಲದೆ ಸಂಕಷ್ಟದಲ್ಲಿದ್ದು ಬೆಳೆದು ನಿಂತ ಬೆಳೆಯನ್ನು ಉಳಿಸಿಕ್ಕೊಳ್ಳಲು ನಾಲೆಗಳಿಗೆ ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ಜಿಲ್ಲೆಯ ನಾಲೆಗಳಿಗೆ ಹರಿಸುವಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ಕಾವೇರಿ ಜಲ ನಿರ್ವಹಣಾ ಮಂಡಳಿ ಮಸೂದ್ ಹುಸೇನ್ ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಕಾವತ್ ರವರಿಗೆ ಪತ್ರ ಬರೆದಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಮಂಡ್ಯ ಜಿಲ್ಲೆಯ ರೈತರ ಸಂಕಷ್ಟ ಹಾಗೂ ಬೆಳೆಗಳ ಪರಿಸ್ಥಿತಿಯನ್ನು ವಿವರಿಸಿ ನೀರು ಬಿಡುಗಡೆಗೆ ಒತ್ತಾಯಿಸಿದ್ದಾರೆ.ಇದೇ ವೇಳೆ ಮಂಡ್ಯ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಸಿಎಸ್ ಪುಟ್ಟರಾಜು ಸಹ ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ನೀರು ಬಿಡುಗಡೆ ಒತ್ತಡ ಹೇರಿದ್ದಾರೆ. ಸುಮಲತಾ ಹಾಗೂ ಪುಟ್ಟರಾಜು ಮನವಿಯನ್ನು ಪುರಸ್ಕರಿಸಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ತಕ್ಷಣವೇ ಕೇಂದ್ರ ಜಲಶಕ್ತಿ ಸಚಿವ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com