ಎಸ್.ಎಂ. ಕೃಷ್ಣ ಸಹೋದರ ಮಾಜಿ ಎಂಎಲ್ ಸಿ ಎಸ್.ಎಂ. ಶಂಕರ್ ನಿಧನ

ಮಾಜಿ ಎಂಎಲ್‍ಸಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸಹೋದರ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ....
ಎಸ್,ಎಂ ಶಂಕರ್
ಎಸ್,ಎಂ ಶಂಕರ್
ಬೆಂಗಳೂರು: ಮಾಜಿ ಎಂಎಲ್‍ಸಿ  ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸಹೋದರ ಎಸ್.ಎಂ.ಶಂಕರ್ (83) ವಿಧಿವಶರಾಗಿದ್ದಾರೆ.
ಎಸ್.ಎಂ.ಶಂಕರ್ ಅವರು ಹಲವು ದಿನಗಳಿಂದ ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಎಸ್.ಎಂ.ಶಂಕರ್ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಿದ್ದರು. ಅವರ ಸ್ವಗ್ರಾಮ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com