ವಿಧಾನಸೌಧದಲ್ಲೇ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

Published: 24th June 2019 12:00 PM  |   Last Updated: 24th June 2019 04:33 AM   |  A+A-


Man stabs himself in toilet of Vidhana Soudha

ರೇವಣ್ಣ ಕುಮಾರ್

Posted By : LSB LSB
Source : The New Indian Express
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. 

ಇಂದು ಮಧ್ಯಾಹ್ನ ವಿಧಾಸೌಧದ  3ನೇ ಮಹಡಿಯ ಶೌಚಾಲಯದಲ್ಲಿ ಚಿಕ್ಕಬಳ್ಳಾಪುರ ಮೂಲದ ಆರ್ ರೇವಣ್ಣ ಕುಮಾರ್ ಎಂಬುವರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. 

ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ರೇವಣ್ಣ ಕುಮಾರ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಕುಮಾರ್ ಅವರು ಸರ್ಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ವಿಧಾನಸೌಧಕ್ಕೆ ಪ್ಲಾಸ್ಟಿಕ್ ಚೀಲಗಳಲ್ಲಿ ಕೆಲ ದಾಖಲೆಗಳನ್ನು ತಂದಿದ್ದರು. ಕತ್ತು ಕುಯ್ದುಕೊಂಡ ಬಳಿಕ ಕುಸಿದು ಬಿದ್ದ ಜಾಗದಲ್ಲಿ ಕೆಲ ಮಾತ್ರೆಗಳು ಸಹ ಪತ್ತೆಯಾಗಿವೆ ಎನ್ನಲಾಗಿದೆ. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ಇನ್ನು ತಿಳಿದು ಬಂದಿಲ್ಲ.
Stay up to date on all the latest ರಾಜ್ಯ news with The Kannadaprabha App. Download now
Poll
coronadead

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಆರೋಪಗಳು ಕೇಳಿಬಂದಿವೆ. ನೀವು ಏನಂತೀರಿ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp