ಹುಬ್ಬಳ್ಳಿ: ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ಹೊತ್ತಿ ಗಾಯಗೊಂಡಿದ್ದ ಮಹಿಳೆ ಸಾವು

ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವಾಗ ಸೀರೆಗೆ ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Published: 25th June 2019 12:00 PM  |   Last Updated: 25th June 2019 01:38 AM   |  A+A-


Hubballi woman dies after setting fire to saree at the temple

ಹುಬ್ಬಳ್ಳಿ: ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ಹೊತ್ತಿ ಗಾಯಗೊಂಡಿದ್ದ ಮಹಿಳೆ ಸಾವು

Posted By : RHN RHN
Source : Online Desk
ಹುಬ್ಬಳ್ಳಿ: ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವಾಗ ಸೀರೆಗೆ ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಹುಬ್ಬಳ್ಳಿಯ ಆದರ್ಶ ನಗರ ನಿವಾಸಿಯಾಗಿದ್ದ ಛಾಯಾ ನಾಗರಾಜ್ ಚಂದ್ರಶೇಖರಮಠ (49) ಮೃತ ಮಹಿಳೆಯಾಗಿದ್ದಾರೆ.ಇವರು ಕಳೆದೊಂದು ವಾರದಿಂದ ಸುಟ್ಟ ಗಾಯಗಳಿಂದ ಬಳಲುತ್ತಿದ್ದು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಘಟನೆ ವಿವರ

ಜೂನ್ 21ರಂದು ಹುಬ್ಬಳ್ಳಿಯ ಅಧ್ಯಾಪಕ ನಗರದ ವಿಶ್ವನಾಥ ಕಲ್ಯಾಣ ಮಂಟಪದ ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸುತ್ತಿದ್ದ ವೇಳೆ ಛಾಯಾ ನಾಗರಾಜ್ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿ ಎಲ್ಲೆಡೆ ವ್ಯಾಪಿಸಿ ಅವರು ಗಾಯಗೊಂಡಿದ್ದರು.

ದೇವಸ್ಥಾನದಲ್ಲಿ ನಡೆದ ಆ ಘಟನೆ ಅಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿತ್ತು.ಶೇ.60 ರಷ್ಟು ಸುಟ್ಟ ಗಾಯವಾಗಿದ್ದ ಮಹಿಳೆ ಛಾಯಾ ನಾಗರಾಜ್ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.

ಘಟನೆಯ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp