ಬೆಂಗಳೂರು ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ಉದ್ಘಾಟನೆ

ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮೂರನೇ ಪ್ರವೇಶ ದ್ವಾರವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು...
ಮೂರನೇ ಪ್ರವೇಶ ದ್ವಾರ
ಮೂರನೇ ಪ್ರವೇಶ ದ್ವಾರ
ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮೂರನೇ ಪ್ರವೇಶ ದ್ವಾರವನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಶನಿವಾರ ಉದ್ಘಾಟಿಸಿದರು.
ಇಂದು ಬೆಳಗ್ಗೆ ಸಚಿವ ಸುರೇಶ್ ಅಂಗಡಿ, ಸಂಸದ, ಪಿಸಿ ಮೋಹನ್ ಹಾಗೂ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಮೂರನೇ ಪ್ರವೇಶ ದ್ವಾರವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದರು.
ಈ ನೂತನ ಪ್ರವೇಶ ದ್ವಾರವೂ ರೈಲು ಮತ್ತು ಮೆಟ್ರೋ ನಿಲ್ದಾಣದ ನಡುವೆ ಸಂಪರ್ಕ ಕಲ್ಪಿಸಲಿದೆ.
ರೈಲು ನಿಲ್ದಾಣದ ಪ್ರವೇಶಕ್ಕೆ ಸದ್ಯ ಎರಡು ಪ್ರವೇಶ ದ್ವಾರಗಳಿದ್ದು, ನಿತ್ಯ ಲಕ್ಷಾಂತರ ಜನರು ನಿಲ್ದಾಣಕ್ಕೆ ಬರುತ್ತಿದ್ದು, ಅವರಿಗೆ ಟಿಕೆಟ್ ನೀಡುವುದು ಮತ್ತು ಪಾರ್ಕಿಂಗ್ ಸೇರಿದಂತೆ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಇದೀಗ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಎದುರಿನಲ್ಲಿ ಮತ್ತೊಂದು ಪ್ರವೇಶ ದ್ವಾರ ನಿರ್ಮಿಸಲಾಗಿದೆ. ಜೊತೆಗೆ ಮೆಟ್ರೋ ನಿಲ್ದಾಣದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬರಲು ಅನುಕೂಲವಾಗುವಂತೆ ಪಾದಚಾರಿ ಮೇಲ್ಸೇತುವೆಯನ್ನೂ ಕೂಡ ನಿರ್ಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com