ಕನ್ನಡಿಗರ ಸಾಂಸ್ಕೃತಿಕ ಏಕೀಕರಣಕ್ಕೆ ನ್ಯೂ ಜೆರ್ಸಿಯ ಕಾಲಭೈರವೇಶ್ವರ ದೇವಾಲಯ ಕೇಂದ್ರವಾಗಲಿದೆ: ಸಿಎಂ ಎಚ್​ಡಿಕೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ....
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆ
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆ
ಬೆಂಗಳೂರು:  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.
ನಂತರ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನವು ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಹೊರನಾಡಿಗರನ್ನು ಸಾಂಸ್ಕೃತಿಕವಾಗಿ ಒಂದಾಗಿಸಲು ಶ್ರದ್ಧಾ ಕೇಂದ್ರಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ಆದಿಚುಂಚನಗಿರಿ ಮಹಾಕ್ಷೇತ್ರ ನ್ಯೂಜೆರ್ಸಿಯಲ್ಲಿ ಸ್ಥಾಪಿಸುತ್ತಿರುವ ಶ್ರೀ ಕಾಲಭೈರೇಶ್ವರ ದೇವಾಲಯ ಒಂದು ಸ್ವಾಗತಾರ್ಹ ಹೆಜ್ಜೆ ಎಂಬುದಾಗಿ ಕುಮಾರಸ್ವಾಮಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಆದ್ದರಿಂದ ಇಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕಂತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದ ಮುಖ್ಯಮಂತ್ರಿಗಳು ಹೊರನಾಡೊನಲ್ಲಿರುವ ಕನ್ನಡಿಗರು ನಮ್ಮ ಸಂಸ್ಕಂತಿಯೊಂದಿಗೆ ಬೆಸೆದುಕೊಳ್ಳೌವುದಕ್ಕಾಗಿ ಇಂತಹಾ ಸಾಂಸ್ಕಂತಿಕ ಕೇಂದ್ರಗಳ ಅಗತ್ಯವಿದೆ ಎಂದರು.
ಆದಿಚುಂಚನಗಿರಿ  ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಸಿಎಂ ಜತೆಗೆ ಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ  ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೂನ್ 30 ರಂದು ದೇವಾಲಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com