ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‍ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‍ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉದ್ಯಾನಗರಿ ಬೆಂಗಳೂರಿನಲ್ಲಿ  ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಚಾರ್ಜಿಂಗ್ ಕೇಂದ್ರಗಳ ಕೊರತೆಯಿಂದಾಗಿ ಯೋಜನೆ ಇನ್ನೂ ಯಶಸ್ವಿಯಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿಸಲು ಬೆಸ್ಕಾಂಗೆ ಸೂಚಿಸಿದೆ. ಇದಕ್ಕಾಗಿ ತಕ್ಷಣ 4 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ.
ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಕ್ರಿಯಾಯೋಜನೆಯಂತೆ ಜಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂ.ಗಳನ್ನು ಬೆಸ್ಕಾಂ ಸಂಸ್ಥೆಗೆ 'ಠೇವಣಿ ಕೊಡುಗೆ' ಮಾಡಲು ಕೆಲವು ಷರತ್ತುಗಳೊಂದಿಗೆ ಹಣ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬ್ಯಾಟರಿಗಳನ್ನು ಬೆಂಗಳೂರು ನಗರ ಮತ್ತು ರಾಜ್ಯಾದ್ಯಂತ ಶೀಘ್ರವಾಗಿ ಚಾರ್ಜಿಂಗ್ ಮಾಡಿಕೊಳ್ಳಲು ಅನುಕೂಲವಾಗುವಂತೆ 100 ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಅನುದಾನ ನೀಡುವಂತೆ ಕೋರಿ ಸಾರಿಗೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.  ಇದೀಗ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com