ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಯನ್ನೇ ಇರಿದು ಕೊಂದ!

ಕ್ಷುಲ್ಲಕ ಕಾರಣಕ್ಕೆ ಸಂಬಂಧಿಗಳ ನಡುವೆ ಪ್ರಾರಂಭವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

Published: 03rd March 2019 12:00 PM  |   Last Updated: 03rd March 2019 03:29 AM   |  A+A-


Man killed by his relation at Puttur

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಯನ್ನೇ ಇರಿದು ಕೊಂದ!

Posted By : RHN RHN
Source : Online Desk
ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಗಳ ನಡುವೆ ಪ್ರಾರಂಭವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ನಡೆದ ಘಟನೆಯಲ್ಲಿ ಯಶವಂತ(19)  ಎಂಬುವವನು ಹತ್ಯೆಯಾಗಿದ್ದಾನೆ. ಈತ ಮೂಲತಃ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಮೋನಪ್ಪ ಎನ್ನುವವರ ಪುತ್ರನೆನ್ನಲಾಗಿದ್ದು  ಆನಂದ ವಗ್ಗ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ.

ಚೂರಿ ಇರಿತದಿಂದ ಗಂಭೀರ ಗಾಯಗೊಂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕ ಬಿದ್ದಿದ್ದ ಯಶವಂತನನ್ನು ರಿಕ್ಷಾ ಚಾಲಕ ಫಾರೂಕ್ ಹಾಗೂ ಉಪ್ಪಿನಂಗಡಿ ಪೋಲೀಸ್ ಸಿಬ್ಬಂದಿಗಳು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದರು. ಆ ಮಾರ್ಗದ ನಡುವೆ ಆತ ಕೊನೆಯುಸಿರೆಳೆದಿದಾನೆ.

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp