ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು

ಚಲನಚಿತ್ರ ನಟ ಪ್ರಕಾಶ್‌ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‍ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕಾಶ್ ರೈ, ಪ್ರತಾಪ್ ಸಿಂಹ
ಪ್ರಕಾಶ್ ರೈ, ಪ್ರತಾಪ್ ಸಿಂಹ

ಬೆಂಗಳೂರು: ಚಲನಚಿತ್ರ ನಟ ಪ್ರಕಾಶ್‌ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‍ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರೂ ಗೈರು ಹಾಜರಾಗಿದ್ದ ಪ್ರತಾಪ್‍ ಸಿಂಹ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.ಈ ಹಿನ್ನೆಲೆಯಲ್ಲಿ ಪ್ರತಾಪ್‍ ಸಿಂಹ ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರಂಟ್‍ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಇದನ್ನೊಪ್ಪದ ನ್ಯಾಯಾಲಯ, ಅವರನ್ನು ಕೆಲ ಕಾಲ ಪೊಲೀಸ್‍ ವಶಕ್ಕೆ ಒಪ್ಪಿಸಿತ್ತು. ನಂತರ, ಸಂಜೆ 10 ಸಾವಿರ ರೂ. ಖಾತರಿ ಹಣ ಪಡೆದು ಜಾಮೀನು ಮಂಜೂರು ಮಾಡಿತು.

 ಇದರಿಂದ ಪ್ರತಾಪ್‍ ಸಿಂಹ ಅವರು ನ್ಯಾಯಾಲಯದ ಆವರಣದಲ್ಲಿ ಸುಮಾರು ಏಳು ಗಂಟೆಗಳ ಕಾಲ ಜಾಮೀನಿಗಾಗಿ ಕಾಯಬೇಕಾಯಿತು.ಪ್ರತಾಪ ಸಿಂಹ ತಮ್ಮ ವೈಯಕ್ತಿಕ ಸಂಗತಿ ಪ್ರಸ್ತಾಪಿಸಿ ಅವಹೇಳನಕಾರಿ ಟ್ವೀಟ್‌ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕಾಶ್‌ ರಾಜ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಅರ್ಜಿಯ ವಿಚಾರಣೆಯನ್ನು  ನಡೆಸುತ್ತಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಮಾರ್ಚ್ 19ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com