ಚುನಾವಣೆ ಹಿನ್ನಲೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ್ದ ನಾಲ್ವರ ಬಂಧನ

ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯವನ್ನು ಸಂಗ್ರಹಿಸಿಟ್ಟು ಮತದಾರರಿಗೆ ಹಂಚಲು ಯತ್ನಿಸುತ್ತಿದ್ದವರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯವನ್ನು ಸಂಗ್ರಹಿಸಿಟ್ಟು ಮತದಾರರಿಗೆ ಹಂಚಲು ಯತ್ನಿಸುತ್ತಿದ್ದವರ ವಿರುದ್ಧ 9 ಕೇಸುಗಳನ್ನು ದಾಖಲಿಸಿರುವ ಅಬಕಾರಿ ಜಾಗೃತ ದಳ 5,800 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ.
ಕಳೆದ ಫೆಬ್ರವರಿಯಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.ಚುನಾವಣೆ ಸಮಯದಲ್ಲಿ ಅಕ್ರಮ ತಡೆಯಲು ಈ ದಾಳಿ ನಡೆಸಲಾಗಿದೆ. ಇದುವರೆಗೆ ಒಟ್ಟು 9 ಕೇಸುಗಳನ್ನು ದಾಖಲಿಸಲಾಗಿದ್ದು ನಾಲ್ವರನ್ನು ಬಂಧಿಸಲಾಗಿದೆ.
ಗೋವಾದಿಂದ 2,576 ಲೀಟರ್ ಮದ್ಯ, 65 ಲೀಟರ್ ಸಾರಾಯಿ, 94 ಲೀಟರ್ ಆಲ್ಕೋಹಾಲ್, 3,300 ಲೀಟರ್ ಬೀರ್ ಗಳನ್ನು ದಾಳಿ ವೇಳೆ ವಶಪಡಿಸಿಕೊಂಡಿದ್ದಾರೆ. 5 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು 13.13 ಲಕ್ಷ ಎಂದು ಅಂದಾಜು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ದಾಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com