ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ

ಕೂಡಲಸಂಗಮದ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಳೆದ ಏಳು ದಿನಗಳಿಂದ ನಗರದ....
ಮಾತೆ ಮಾಹಾದೇವಿ
ಮಾತೆ ಮಾಹಾದೇವಿ
ಬೆಂಗಳೂರು: ಕೂಡಲಸಂಗಮದ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಳೆದ ಏಳು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.
ಮೂಲಗಳ ಪ್ರಕಾರ, ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.
ಹೆಚ್ಚಿನ ಚಿಕಿತ್ಸೆ ಕುರಿತಂತೆ ತೀರ್ಮಾನ ಕೈಗೊಳ್ಳಲು ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ಸಭೆ ಸೇರಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. ಗೃಹ ಸಚಿವ ಎಂ.ಬಿ. ಪಾಟೀಲ್​ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಶೀಘ್ರದಲ್ಲೇ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com