ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಿಪ್ಯಾಟ್, ಮತಯಂತ್ರ ಬಳಕೆ ಕುರಿತು ಆಯೋಗದ ಮಾಹಿತಿ!

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗ ಕೂಡ ಮತದಾರರಲ್ಲಿ ಮತದಾನದ ಅರಿವು ಮೂಡಿಸುವ ಕೆಲಸಕ್ಕೆ ಚಾಲನೆ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ ನೀಡಿದೆ.

Published: 14th March 2019 12:00 PM  |   Last Updated: 14th March 2019 01:00 AM   |  A+A-


EC demonstrated the use of EVM & VVPAT, at a mass marriage function in Koppal

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಿಪ್ಯಾಟ್, ಮತಯಂತ್ರಗಳ ಪ್ರಾತ್ಯಕ್ಷಿಕೆ

Posted By : SVN SVN
Source : ANI
ಕೊಪ್ಪಳ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗ ಕೂಡ ಮತದಾರರಲ್ಲಿ ಮತದಾನದ ಅರಿವು ಮೂಡಿಸುವ ಕೆಲಸಕ್ಕೆ ಚಾಲನೆ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ ನೀಡಿದೆ.

ಕರ್ನಾಟಕದ ಕೊಪ್ಪಳದ ಹಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಆಗಮಿಸಿ ಅಲ್ಲಿ ನೆರೆದಿದ್ದ ನೂರಾರು ಮಂದಿಯ ಮುಂದೆ  ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಬಳಕೆ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಮತದಾನದ ಮಹತ್ವದ ಕುರಿತೂ ಅಧಿಕಾರಿಗಳು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವ ಕೆಲಸ ಕೂಡ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನು ಇದೇ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಈಗಾಗಲೇ ಚುನಾವಣಾ ಆಯೋಗ ಮತದಾರ ಪಟ್ಟಿ ತಯಾರಿಸುವ ಕಾರ್ಯದಲ್ಲಿ ಮಗ್ನವಾಗಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಮತದಾನ ಮಾಡುವ ಮತದಾರರು ಹೆಸರು ನೋಂದಣಿ ಮಾಡಿಕೊಳ್ಳಬಹುದು. ಆಯೋಗದ ವೆಬ್ ಸೈಟ್ ನಲ್ಲಿ ಈ ಬಗ್ಗೆ ಮಾಹಿತಿ ಇದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಚುನಾವಣಾ ಆಯೋಗದ ಕಚೇರಿ ಸಂಪರ್ಕಿಸುವಂತೆ ಅಧಿಕಾರಿಗಳು ಹೇಳಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp