ಚೆಕ್‍ ಬೌನ್ಸ್ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ಬಿಡುಗಡೆ, 100 ರೂ. ದಂಡ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಗುರುವಾರ ಕೆಲ ಕಾಲ ಪೊಲೀಸ್‍ ವಶಕ್ಕೆ ನೀಡಿದ್ದ ನಗರದ...

Published: 15th March 2019 12:00 PM  |   Last Updated: 15th March 2019 05:10 AM   |  A+A-


MLA Gulihatti shekar released in cheque bounce case

ಗೂಳಿಹಟ್ಟಿ ಶೇಖರ್

Posted By : LSB LSB
Source : UNI
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಗುರುವಾರ ಕೆಲ ಕಾಲ ಪೊಲೀಸ್‍ ವಶಕ್ಕೆ ನೀಡಿದ್ದ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಿಚಾರಣಾ ನ್ಯಾಯಾಲಯ, ನಂತರ 100 ರೂ. ದಂಡ ಪಾವತಿಸಿಕೊಂಡು ಅವರನ್ನು ಬಿಡುಗಡೆ  ಮಾಡಿದೆ. ಜೊತೆಗೆ, ಇನ್ನು ಮುಂದೆ ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸದಂತೆ ಎಚ್ಚರಿಕೆಯನ್ನೂ ನೀಡಿದೆ. 
 
ಚೆಕ್‍ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆಗೆ ಗೈರು ಹಾಜರಾಗಿದ್ದ ಗೂಳಿಹಟ್ಟಿ ಶೇಖರ್ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಗುರುವಾರ ವಿಚಾರಣೆಗೆ ಹಾಜರಾಗಿ ವಾರಂಟ್‍ ಹಿಂಪಡೆಯುವಂತೆ ಮನವಿ ಸಲ್ಲಿಸಿದರು. 
 
ಆದರೆ, ಇದನ್ನೊಪ್ಪದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಗೂಳಿಹಟ್ಟಿ ಶೇಖರ್ ಅವರನ್ನು ಕೆಲ ಕಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದರು.
 
1.25 ಕೋಟಿ ರೂ. ಮೊತ್ತದ ಚೆಕ್‍ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಶಾಸಕ ಗೂಳಿ ಹಟ್ಟಿ ಶೇಖರ್ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಜನತಾ ಕೋ ಆಪರೇಟಿವ್ ಸೊಸೈಟಿ ದೂರು ದಾಖಲಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಆರೋಪಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಅವರು ವಿಚಾರಣೆಗೆ ಗೈರುಹಾಜರಾಗಿದ್ದಲ್ಲದೆ , ಸೂಕ್ತ ಕಾರಣವನ್ನು ಕೂಡ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp