ಕಟ್ಟಡ ಕುಸಿದಾಗ 30ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು: ಪ್ರತ್ಯಕ್ಷ ದರ್ಶಿಗಳ ಹೇಳಿಕೆ

ಧಾರವಾಡದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆೇ 6ಕ್ಕೆ ಏರಿಕೆಯಾಗಿದ್ದು, ಇಂದು ಮತ್ತೆ ನಾಲ್ಕು ಮೃತದೇಹಗಳು ಸಿಕ್ಕಿವೆ.
ಧಾರವಾಡ ಕಟ್ಟಡ ಕುಸಿತ
ಧಾರವಾಡ ಕಟ್ಟಡ ಕುಸಿತ
ಧಾರವಾಡ: ಧಾರವಾಡದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಇಂದು ಮತ್ತೆ ನಾಲ್ಕು ಮೃತದೇಹಗಳು ಸಿಕ್ಕಿವೆ.
ಇಲ್ಲಿನ ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಮೃತನನ್ನು ಸಲಿಮ್ ಮಕಾಂದರ್ ಎಂದು ಗುರುತಿಸಲಾಗಿದೆ. 
ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇತ್ತು. ಇಲ್ಲಿ ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿ 30ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ಮಂಗಳವಾರ ರಾತ್ರಿ ಸುಮಾರು 1.30ಕ್ಕೆ ಎನ್‍ಡಿಆರ್‍ಎಫ್(National Disaster Response Force) ತಂಡ ಸ್ಥಳಕ್ಕೆ ಆಗಮಿಸಿದ್ದು, ಸುಮಾರು 30 ಜನರ ತಂಡದಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಎನ್‍ಡಿಆರ್‍ಎಫ್‍ಗೆ ಶ್ವಾನದಳ ಸಾಥ್ ನೀಡಿದೆ.
ಈವರೆಗೂ ರಕ್ಷಣಾ ಕಾರ್ಯದಲ್ಲಿ 54 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಎರಡು ದಿನಗಳ ಕಾಲ ಕಾರ್ಯಾಚರಣೆ ನೆಡೆಯುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಘಾಜಿಯಾಬಾದ್ NDRFನ ಮತ್ತೊಂದು ತಂಡದ 78 ಸಿಬ್ಬಂದಿ ಧಾರವಾಡಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳದಲ್ಲಿ ಅವರಿಂದಲೂ ಕಾರ್ಯಾಚರಣೆ ಮುಂದುವರಿಯಲಿದ್ದು, ಅವಶೇಷಗಳ ಅಡಿಯಲ್ಲಿ ನಾಲ್ಕು ಮೃತ ದೇಹ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಇತ್ತ ಮಾಜಿ ಸಚಿವ ವಿನಯ ಕುಲಕರ್ಣಿ ಸಹ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಆಗಿದ್ದೇನು?
ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಮಂಗಳವಾರ ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ ಕುಸಿದು ಬಿದ್ದಿತ್ತು. ಈ ಕಟ್ಟಡ ಕಾಮಗಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿತ್ತು. ಈ ಪೈಕಿ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com