ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 8.41 ಲಕ್ಷ ವಿದ್ಯಾರ್ಥಿಗಳು ಹಾಜರು

ಇಂದಿನಿಂದ (ಗುರುವಾರ) ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಗಳು ಸಾಂಗವಾಗಿ ನೆರವೇರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ....
ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 8.41 ಲಕ್ಷ ವಿದ್ಯಾರ್ಥಿಗಳು ಹಾಜರು
ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 8.41 ಲಕ್ಷ ವಿದ್ಯಾರ್ಥಿಗಳು ಹಾಜರು
ಬೆಂಗಳೂರು: ಇಂದಿನಿಂದ (ಗುರುವಾರ) ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಗಳು ಸಾಂಗವಾಗಿ ನೆರವೇರಲು  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಾಕಷ್ಟು ಸಿದ್ದತೆ ನಡೆಸಿದೆ.  ಈ ವರ್ಷ 8,41,666 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ
ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆಗೆ ಭಾರೀ ಭದ್ರತೆ ಒದಗಿಸಲಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ.ರಾಜ್ಯದಾದ್ಯಂತ 2,847 ಕೇಂದ್ರಗಳಲ್ಲಿ ನಡೆಯಲಿದೆ. ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ 3,578 ಹೆಚ್ಚುವರಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರಿನ ದಕ್ಷಿಣದಿಂದ 65,451 ವಿದ್ಯಾರ್ಥಿಗಳಿದ್ದರೆ ಬೆಂಗಳೂರು ಉತ್ತರದಲ್ಲಿ 49,336 ವಿದ್ಯಾರ್ಥಿಗಳು  ಹಾಜರಾಗುತ್ತಿದ್ದಾರೆ.
ಕೊಡಗಿನಲ್ಲಿ 7,240 ವಿದ್ಯಾರ್ಥಿಗಳು, ಶಿರಸಿ, ಉತ್ತರ ಕನ್ನಡದಲ್ಲಿ 9,766 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು ಒಟ್ಟಾರೆ  4,651 ಮಕ್ಕಳು ವಿಶೇಷ ಚೇತನರಾಗಿದ್ದು ಲಾಖೆಯು ಈ ಅಭ್ಯರ್ಥಿಗಳಿಗೆ ವಿಷಯವನ್ನು ಆಯ್ಕೆ ಮಾಡುವಲ್ಲಿ  ಬಹುಆಯ್ಕೆಯ ಅನುಕೂಲತೆ ಒದಗಿಸಿದೆ.  ಗಣಿತ ಮತ್ತು ವಿಜ್ಞಾನದ ಬದಲಿ ಬೇರೆ ವಿಷಯಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com