ವಕೀಲೆ ಆತ್ಮಹತ್ಯೆ ಪ್ರಕರಣ: ಆರೋಪಿ ಬಿಬಿಎಂಪಿ ಕಾರ್ಪೋರೇಟರ್ ಬಂಧನ

25 ವರ್ಷದ ದಲಿತ ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ ವಿ. ಸುರೇಶ್‌....

Published: 23rd March 2019 12:00 PM  |   Last Updated: 23rd March 2019 07:13 AM   |  A+A-


Dalit lawyer suicide case: CID arrests accused Congress corporator

ವಿ. ಸುರೇಶ್‌ - ಧರಣಿ

Posted By : LSB LSB
Source : The New Indian Express
ಬೆಂಗಳೂರು: 25 ವರ್ಷದ ದಲಿತ ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ ವಿ. ಸುರೇಶ್‌ ಅವರನ್ನು ಸಿಐಡಿ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

ಕಳೆದ ರಾತ್ರಿ ಆರೋಪಿ ಸುರೇಶ್ ನನ್ನು ತಮಿಳುನಾಡಿನ ಸೇಲಂ ಬಳಿಯ ಎರ್ರಾಕಾಡ್ ರೆಸಾರ್ಟ್ ನಲ್ಲಿದ್ದ ಬಂಧಿಸಿದ್ದು, ಕೋರ್ಟ್ ಗೆ ಹಾಜರುಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಪಿಐ ಪೊಲೀಸರು ಆರೋಪಿಯನ್ನು ಕೊರಮಂಗಲದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಕಳೆದ ವರ್ಷ ಡಿಸೆಂಬರ್ 31ರಂದು ವಕೀಲೆ ಧರಣಿ ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡ ರೀತಿಯಲ್ಲಿ ಸಾವನ್ನಪ್ಪಿದ್ದರು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾರ್ಪೋರೇಟರ್ ಸುರೇಶ್ ಅವರು ಧರಣಿಗೆ ಕಿರಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಈ ಕೇಸಿಗೆ ಸಂಬಂಧಿಸಿದಂತೆ ಈವರೆಗೂ 11 ಜನ ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp