ಬೆಂಗಳೂರಿನ ವಿಜಯ್ ಮಲ್ಯ ಆಸ್ತಿ ಮುಟ್ಟಿಗೋಲಿಗೆ ದೆಹಲಿ ಕೋರ್ಟ್ ಆದೇಶ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆರಾ) ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ
ವಿಜಯ್ ಮಲ್ಯ
ವಿಜಯ್ ಮಲ್ಯ
ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆರಾ) ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ವಿಜಯ ಮಲ್ಯ ಗೆ ಸೇರಿದ ಬೆಂಗಳೂರು ನಗರದಲ್ಲಿರುವ ಆಸ್ತಿ- ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ದೆಹಲಿಯ ನ್ಯಾಯಾಲಯ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನೀಡಿದ್ದ ಆದೇಶ ಜಾರಿಗಳಿಸಲು ಹೆಚ್ಚಿನ ಸಮಯ ನೀಡುವಂತೆ ಬೆಂಗಳೂರು ಪೊಲೀಸರ ಜಾರಿ ನಿರ್ದೇಶನಾಲಯದ ಮೂಲಕ ಸಲ್ಲಿಸಿದ್ದ ಮನವಿ ವಿಚಾರಣೆ ನಡೆಸಿದ ನಂತರ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೀಪಕ್ ಶರಾವತ್ ಹೊಸ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಮುಂದಿನ ವಿಚಾರಣೆಯ ದಿನವಾದ ಜುಲೈ 10ರೊಳಗೆ ಮಲ್ಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ರಾಜ್ಯ ಪೊಲೀಸರಿಗೆ ಆದೇಶಿಸಿದೆ. 
ಪ್ರಕರಣ ಸಂಬಂಧ ತಾನು ಹೊರಡಿಸಿದ್ದ ಸಮನ್ಸ್ ನಂತೆ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲವಾಗಿರುವ ಮಲ್ಯ ಅವರನ್ನು ಘೋಷಿತ ಆರ್ಥಿಕ ಅಪರಾಧಿ ಎಂದು ಕೋರ್ಟ್ ಕಳೆದ ಜನವರಿ 4ರಂದು ಘೋಷಿಸಿತ್ತು.
ಪದೇಪದೇ ಸಮನ್ಸ್ ನೀಡಿದ್ದರೂ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲರಾದ ಹಿನ್ನೆಲೆಯಲ್ಲಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆರಾ) ಉಲ್ಲಂಘನೆ ಪ್ರಕರಣದಲ್ಲಿ ಮಲ್ಯ ಅವರನ್ನು ಘೋಷಿತ ವಿತ್ತೀಯ ಅಪರಾಧಿ ಎಂದು ನ್ಯಾಯಾಲಯ ಘೋಷಿಸಿತ್ತು.
ಪ್ರಕರಣ ಸಂಬಂಧ ನ್ಯಾಯಾಲಯ ಕಳೆದ ವರ್ಷದ ಮೇ 8ರಂದು ಮಲ್ಯ ಅವರಿಗೆ ಸೇರಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿ, ಈ ಸಂಬಂಧ ವರದಿ ಸಲ್ಲಿಸಲು ಸೂಚನೆ ನೀಡಿತ್ತು.
ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಾಗಿಲ್ಲ, ಹಾಗಾಗಿ ಹೆಚ್ಚಿನ ಸಮಯ ನೀಡಬೇಕು ಎಂದು ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಮದ್ಯದ ದೊರೆ ವಿರುದ್ದ ಏಪ್ರಿಲ್ 12, 2017 ರಂದು ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com