ಬೆಂಗಳೂರು: ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ಹತ್ಯೆ!

ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಲಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳುರಿನ ಪದ್ಮನಾಭನಗರದಲ್ಲಿ ನಡೆದಿದೆ.

Published: 24th March 2019 12:00 PM  |   Last Updated: 24th March 2019 11:09 AM   |  A+A-


File Image

ಸಂಗ್ರಹ ಚಿತ್ರ

Posted By : RHN RHN
Source : Online Desk
ಬೆಂಗಳೂರು: ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಲಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳುರಿನ ಪದ್ಮನಾಭನಗರದಲ್ಲಿ ನಡೆದಿದೆ.

ಗೌಡಯ್ಯನಪಾಳ್ಯದ ನಿವಾಸಿ ಲಿಂಗಪ್ಪ (62)  ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್ ಆಗಿದ್ದು  ಈತ ಮೂಲತಃ ಬಾಗಲಕೋಟೆಯವರಾಗಿದ್ದರು.ಉತ್ತರಹಳ್ಳಿ ಮುಖ್ಯರಸ್ತೆಯ ಕದಿರೇನಹಳ್ಳಿ ಪೆಟ್ರೋಲ್‍ಬಂಕ್ ಸಮೀಪದ ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರದ ಸೆಕ್ಯೂರಿಟಿ ಗಾರ್ಡ್  ಆಗಿದ್ದ ಲಿಂಗಪ್ಪ ಎಟಿಎಂ ಕೇಂದ್ರದ ಫಸ್ಟ್ ಫ್ಲೋರ್ ನಲ್ಲಿ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಬಳಿಕ ಅವರ ಜೇಬಿನಲ್ಲಿದ್ದ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಭಾನುವಾರ ಮುಂಜಾನೆ ಕಟ್ಟಡದ ಮೊದಲ ಮಹಡಿಯಲ್ಲಿದ್ದ ಬ್ಯೂಟಿ ಪಾರ್ಲರ್ ಮಾಲೀಕರು ಅಂಗಡಿ ತೆರೆಯುವುದಕ್ಕೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರು ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ  ಕುಮಾರಸ್ವಾಮಿ ಲೇಔಟ್ ಪೊಲೀಸರು ಶವವನ್ನು ಕೆಂಪೇಗೌಡ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. 

ಲಿಂಗಪ್ಪ ಕಳೆದ ನಾಲ್ಕು ವರ್ಷಗಳಿಂದ  ಬ್ಯಾಂಕಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ.  ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp