ಮೈಸೂರು, ಮಂಡ್ಯ ಅಷ್ಟೇ ಅಲ್ಲ, ಬೆಂಗಳೂರಿನಲ್ಲೂ ಐಟಿ ದಾಳಿ!

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ದೋಸ್ತಿ ಸರ್ಕಾರದ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮೈಸೂರು, ಮಂಡ್ಯ ಅಷ್ಟೇ ಅಲ್ಲದೇ ಬೆಂಗಳೂರಿನ ಹಲವು ಉಧ್ಯಮಿಗಳ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿದೆ.

Published: 28th March 2019 12:00 PM  |   Last Updated: 28th March 2019 05:00 AM   |  A+A-


IT Officials Raids in Bengaluru

ಸಂಗ್ರಹ ಚಿತ್ರ

Posted By : SVN SVN
Source : Online Desk
ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ದೋಸ್ತಿ ಸರ್ಕಾರದ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮೈಸೂರು, ಮಂಡ್ಯ ಅಷ್ಟೇ ಅಲ್ಲದೇ ಬೆಂಗಳೂರಿನ ಹಲವು ಉದ್ಯಮಿಗಳ ಮನೆಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿದೆ.

ಬೆಂಗಳೂರಿನ ಹಲವು ಉದ್ಯಮಿಗಳ ಮನೆ ಮೇಲೆ ಬುಧವಾರ ರಾತ್ರಿ ಐಟಿ ದಾಳಿ ನಡೆದಿದ್ದು,10ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿಯಾಗಿದೆ. ಬೆಂಗಳೂರು ಉದ್ಯಮಿ ಸೌತ್ ಎಂಡ್ ಸರ್ಕಲ್ ನಲ್ಲಿರುವ ಸಿದ್ದಿಕ್ ಶೇಟ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬಸವನಗುಡಿ, ಜಯನಗರದ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಸಿದೀಕ್ ಶೇಟ್ ಮನೆ ಮೇಲೆ ದಾಳಿ ನಡೆದಿದೆ. ಬೆಂಗಳೂರಿನ ನಗರದ ಸೌತ್ ಎಂಡ್ ಸರ್ಕಲ್ ಬಳಿ ಇರೋ ಸಿದೀಕ್ ಸೆಟ್ ಮನೆ ಮೇಲೆ ದಾಳಿಯಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

5 ಜನ ಉದ್ಯಮಿಗಳ ಮೇಲೆ ಐಟಿ ದಾಳಿ ನಡೆದಿದೆ. ಸಿದ್ದಿಕ್ ಸೇಟ್ ಮೂಲತಃ ಜೊಳದ ವ್ಯಾಪಾರಿ ಎಂದು ಹೇಳಲಾಗಿದ್ದು ಮೂರು ಜನ ಅಧಿಕಾರಿಗಳ ತಂಡ ಅನೇಕ ಮಾಹಿತಿ ಕಲೆ ಹಾಕಿ  ತೆರಳಿದೆ.

ಬುಧವಾರ ಮಧ್ಯಾಹ್ನವಷ್ಟೇ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ, ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp