ದೋಸ್ತಿ ನಾಯಕರಿಗೆ ಐಟಿ ಶಾಕ್, ಸಚಿವ ಸಿಎಸ್ ಪುಟ್ಟರಾಜು ಆಪ್ತರ ನಿವಾಸದ ಮೇಲೆ ಐಟಿ ದಾಳಿ

ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಹಾಗೂ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಅವರ ಸಂಬಂಧಿಕರ ನಿವಾಸದ ಮೇಲೆ...

Published: 28th March 2019 12:00 PM  |   Last Updated: 28th March 2019 04:58 AM   |  A+A-


IT Raid on Minister CS Puttaraju house in Mysuru

ಸಂಗ್ರಹ ಚಿತ್ರ

Posted By : SVN SVN
Source : Online Desk
ಮಂಡ್ಯ: ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಹಾಗೂ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಅವರ ಸಂಬಂಧಿಕರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಪುಟ್ಟರಾಜು ಸ್ವಗ್ರಾಮ ಮೈಸೂರಿನ ಚಿನಕುರಳಿಯಲ್ಲಿರುವ ಮನೆ ಮೇಲೆ ಬೆಳಗ್ಗೆ ಐಟಿ ದಾಳಿ ನಡೆದಿದ್ದು, ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಒಟ್ಟು ಮೂರು ಕಾರುಗಳಲ್ಲಿ ಆಗಮಿಸಿರುವ ಐಟಿ ಆಧಾರಿಗಳು ಸತತ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅಂತೆಯೇ ಅಧಿಕಾರಿಗಳು ತಮ್ಮೊಂದಿಗೆ ಸಿಆರ್ ಪಿಎಫ್ ಸೈನಿಕರನ್ನು ಭದ್ರತೆಗಾಗಿ ಕರೆತಂದಿದ್ದಾರೆ. 
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp