ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.2.75ರಷ್ಟು ಹೆಚ್ಚಳ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ....
ವಿಧಾನಸೌಧ
ವಿಧಾನಸೌಧ
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2.75ರಷ್ಟು ಏರಿಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. 
ಜನವರಿ 1, 2019ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಶೇ.3.75ರಿಂದ ಶೇ.6.50ಕ್ಕೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಚ್ಚಳವಾಗಲಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com