ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿ ಬಂಧನ

2019ರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ಆತನಿಂದ ಎರಡೂವರೆ ಲಕ್ಷ ರೂ. ನಗದು ಹಾಗೂ 18 ಮೊಬೈಲ್...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: 2019ರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ಆತನಿಂದ ಎರಡೂವರೆ ಲಕ್ಷ ರೂ. ನಗದು ಹಾಗೂ 18 ಮೊಬೈಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಲೊಟ್ಟೆಗೊಲ್ಲಹಳ್ಳಿಯ ಶೇಖ್ ಶಫಿ (32) ಬಂಧಿತ ಆರೋಪಿ. ಮೊಬೈಲ್ ಮೂಲಕ ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದ ಪ್ರಮುಖ ಆರೋಪಿ ಮುಕೇಶ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. 
ಲೊಟ್ಟೆಗೊಲ್ಲಹಳ್ಳಿಯ ಜಲಗೇರಮ್ಮ ದೇವಸ್ಥಾನ ಹತ್ತಿರದ ಮನೆಯೊಂದರಲ್ಲಿ ಮಾ.28ರಂದು ನಡೆದ ರಾಯಲ್ ಚಾಲೆಂಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಟಿ-20 ಕ್ರಿಕೆಟ್ ಪಂದ್ಯವನ್ನು ಮೊಬೈಲ್ ಮೂಲಕ ಹಣ ಕಟ್ಟಿಸಿಕೊಂಡು ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಆಲೋಕ್ ಕುಮಾರ್ ಹಾಗೂ ಸಿಸಿಬಿ, ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್.ಹೆಚ್.ರಾಮಚಂದ್ರಯ್ಯ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com