ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಓಕಾ ನೇಮಕ

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ಅಭಯ್ ಓಕಾ
ಅಭಯ್ ಓಕಾ
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ಓಕಾ  ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ  ಕೇಂದ್ರ ಕಾನೂನು ಸಚಿವಾಲಯ ಹಾಗೂ ರಾಷ್ಟ್ರಪತಿ ಭವನಕ್ಕೆ ಶಿಫಾರಸು ಮಾಡಿತ್ತು.
ಕೊಲಿಜಿಯಂ ಶಿಪಾರಸನ್ನು ಮಾನ್ಯ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ಓಕಾ  ಅವರ ನೇಮಕಕ್ಕಾಗಿ ಆದೇಶ ಹೊರಡಿಸಿದ್ದಾರೆ. 
ಕರ್ನಾಟಕದ ಈ ಹಿಂದಿನ ಸಿಜೆ ದಿನೇಶ್ ಮಹೇಶ್ವರಿ  ಜ.15ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಭಡ್ತಿ ಪಡೆದಿದ್ದರು. ನಂತರ ಎಲ್. ನಾರಾಯಣಸ್ವಾಮಿ ಹಂಗಾಮಿ ಸಿಜೆ ಆಗಿ ಅಧಿಕಾರ ವಹಿಸಿಕೊಂಡಿದ್ದರು.
ಓಕಾ ಅವರು 1960ರ ಮೇ 25ರಂದು ಜನಿಸಿದ್ದು ಬಾಂಬೆ ಯೂನಿವರ್ಸಿಟಿಯಲ್ಲಿ ಕಾನೂನು ಹಾಗೂ ಎಲ್​ಎಲ್​ಎಂ ಪದವಿ ಗಳಿಸಿದ್ದಾರೆ.ಇವರ ತಂದೆ ಶ್ರೀನಿವಾಸ ಓಕಾ ಸಹ ವಕೀಲರಾಗಿದ್ದು ಅವರ ಕೆಳಗೆ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದರು. . 2003ರಲ್ಲಿ ಬಾಂಬೆ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದ ಅವರು  2005ರಿಂದ ಕಾಯಂ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com