ಫನಿ ಚಂಡಮಾರುತ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ

ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿರುವಂತೆಯೇ ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿರುವಂತೆಯೇ ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.
ಫ್ಯಾನಿ ಚಂಡಮಾರುತದ ಪರಿಣಾಮ ತಮಿಳುನಾಡು, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ನಿನ್ನೆ ಸಂಜೆ ಬೆಂಗಳೂರು, ಮೈಸೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಎಡಬಿಡದೆ ಮಳೆಯಾಗಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಮೆಜೆಸ್ಟಿಕ್, ಬಸವನಗುಡಿ, ಜಯನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. 
ಇನ್ನು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೆ ಹಲವು ಪ್ರದೇಶಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಿದ್ಯುತ್ ವ್ಯತ್ಯಯವಾಗಿತ್ತು.  ಇನ್ನೆರಡು ದಿನಗಳ ಕಾಲ ಚಂಡಮಾರುತದಿಂದ ರಾಜ್ಯದಲ್ಲಿ ಮಳೆ ಸೃಷ್ಟಿಯಾಗುವ ನಿರೀಕ್ಷೆ ಇದೆ. ಮೇ 3ರಂದು ಫ್ಯಾನಿ ಚಂಡಮಾರುತ ಒಡಿಶಾ ಕಡಲ ತೀರ ಪ್ರದೇಶ ಹಾದು ಹೋಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com