ರಾಜ್ಯದಲ್ಲಿ ಬರ ಪರಿಸ್ಥಿತಿ: ವರುಣನ ಕೃಪೆ ಕೋರಿ ಯಜ್ಞ, ಪೂಜಾ ಕೈಂಕರ್ಯಗಳಿಗೆ ಮುಖ್ಯಮಂತ್ರಿ ನಿರ್ಧಾರ

ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಪೂಜೆ ಮತ್ತು ಯಜ್ಞಗಳ ಮೂಲಕ ವರುಣನ ಮೊರೆ ಹೋಗಲು ನಿರ್ಧರಿಸಿದ್ದಾರೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ  ಬರಗಾಲದ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಪೂಜೆ ಮತ್ತು ಯಜ್ಞಗಳ ಮೂಲಕ ವರುಣನ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸದ್ಯದಲ್ಲೇರಾಜ್ಯದಲ್ಲಿನ ಪ್ರಮುಖ ದೇವಾಲಯಗಳಲ್ಲಿ  ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಿದ್ದಾರೆ.

ಈ ವರ್ಷ ರಾಜ್ಯದಲ್ಲಿ ದುರ್ಬಲ ಮುಂಗಾರಿನ ಮುನ್ಸೂಚನೆ ಸಿಕ್ಕಿದ್ದು, ಬರ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳಲಿದೆ  ಎಂದು ಖ್ಯಾತ ಜ್ಯೋತಿಷಿ ದ್ವಾರಕನಾಥ್ ಮುಖ್ಯಮಂತ್ರಿಗೆ ತಿಳಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೈಗಾ, ಶೃಂಗೇರಿ ಹಾಗೂ ಮತ್ತಿತರ ಕಡೆಗಳಲ್ಲಿ  ಪೂಜೆ ನಡೆಸಲು ನಿರ್ಧರಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಕೈಗಾದಲ್ಲಿ ವಿಶೇಷ ಪೂಜೆ ಮಾಡಿದ್ದರೆ ಭಾರೀ ಮಳೆಯಾಗಲಿದೆ ಎಂಬ ಸಲಹೆ ಮೇರೆಗೆ ಅಲ್ಲಿ ಪೂಜೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಪ್ರತಿಪಕ್ಷ ಹಾಗೂ ರೈತರಿಂದ  ತೀವ್ರ ಟೀಕೆಗಳು ವ್ಯಕ್ತವಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com