ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ವಿವಾದ, ಎಚ್ ಡಿಕೆ ವಿರುದ್ಧದ ದೂರನ್ನು ಪೊಲೀಸ್‌ ಠಾಣೆಗೆ ವರ್ಗಾಯಿಸಿದ ನ್ಯಾಯಾಲಯ

ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ದೂರನ್ನು ನ್ಯಾಯಾಲಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.
ಜೆಡಿಎಸ್-ಕಾಂಗ್ರೆಸ್ ಧರಣಿ
ಜೆಡಿಎಸ್-ಕಾಂಗ್ರೆಸ್ ಧರಣಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ದೂರನ್ನು ನ್ಯಾಯಾಲಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಕಚೇರಿ ಎದುರು ಧರಣಿ ನಡೆಸಿದ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶಿಸಬೇಕು ಎಂದು ಕೋರಿದ್ದ ಅರ್ಜಿಯನ್ನು  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದೆ. ಎಂ.ಮಲ್ಲಿಕಾರ್ಜುನ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಸೂಕ್ತ ಕ್ರಮಕ್ಕಾಗಿ ನ್ಯಾಯಾಧೀಶ ರಾಮಚಂದ್ರ ಎಚ್.ಹುದ್ದರ ಅವರು ಕಮರ್ಷಿಯಲ್ ಸ್ಟ್ರೀಟ್‌ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.
ಇತ್ತೀಚೆಗೆ ಮಲ್ಲಿಕಾರ್ಜುನ ಎಂಬುವವರು ಮುಖ್ಯಮಂತ್ರಿ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಮಾರ್ಚ್ 27ರಂದು ನಡೆದ ಐಟಿ ದಾಳಿಯ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ ಮತ್ತು ನಗರದ ಐಟಿ ಕೇಂದ್ರ ಕಚೇರಿ ಎದುರು ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಯವರ ವಿರುದ್ಧ ಕ್ರಮಕೈಗೊಳ್ಳುವಂತೆ ಕರ್ನಾಟಕ ಆದಾಯ ತೆರಿಗೆ ಇಲಾಖೆ ಕೂಡ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ಕಚೇರಿಯ ಎದುರು ಧರಣಿ ನಡೆಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ, ಮುಖ್ಯಮಂತ್ರಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com