ಬಿಬಿಎಂಪಿ ಉಪ ಚುನಾವಣೆ; ಬಿಜೆಪಿ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪೈಪೋಟಿ

ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಕಾವೇರಿಪುರ ಮತ್ತು ಸಗಯಪುರ ವಾರ್ಡ್ ಗಳಿಗೆ ಮೇ ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯ ಕಾವೇರಿಪುರ ಮತ್ತು ಸಗಯಪುರ ವಾರ್ಡ್ ಗಳಿಗೆ ಮೇ 29ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಉಪ ಮೇಯರ್ ರಮಿಲಾ ಉಮಾಶಂಕರ್ ಅವರ ನಿಧನದಿಂದ ಕಾವೇರಿಪುರ ವಾರ್ಡ್ 2018 ಅಕ್ಟೋಬರ್ ನಿಂದ ಮತ್ತು ಸಗಯಪುರ ವಾರ್ಡ್ ನಲ್ಲಿ ಕಾರ್ಪೊರೇಟರ್ ಎಳುಮಲೈ ನಿಧನದಿಂದ ಕಳೆದ ಡಿಸೆಂಬರ್ ನಿಂದ ತೆರವಾಗಿತ್ತು. ರಮಿಲ ಜೆಡಿಎಸ್ ನವರಾಗಿದ್ದರೆ ಎಳುಮಲೈ ಸ್ವತಂತ್ರ ಕೌನ್ಸಿಲರ್ ಆಗಿದ್ದರು.
ಕಳೆದ ವರ್ಷ  ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ ವಿಧಾನಸಭೆ ಉಪ ಚುನಾವಣೆ ಹಾಗೂ ಈ ಬಾರಿಯ ಲೋಕಸಭೆ ಚುನಾವಣೆಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಾಂಗ್ರೆಸ್-ಜೆಡಿಎಸ್ ಕಣಕ್ಕಿಳಿಸುತ್ತಾ ಬಂದಿವೆ. ಅದು ಬಿಬಿಎಂಪಿ ಚುನಾವಣೆಗೆ ಕೂಡ ಅನ್ವಯವಾಗುತ್ತದೆ. ಕಾವೇರಿಪುರ ವಾರ್ಡ್ ನಿಂದ ಜೆಡಿಎಸ್ ಹಾಗೂ ಸಗಯಪುರ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪರಸ್ಪರ ಬೆಂಬಲ ನೀಡಲಿವೆ ಎಂದು ಜೆಡಿಎಸ್ ನಾಯಕ ಟಿ ಎ ಶರವಣ ತಿಳಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಚುನಾವಣೆಯಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್ ಪ್ರಕಾಶ್ ತಿಳಿಸಿದ್ದಾರೆ.
ಇನ್ನೊಂದೆಡೆ ಎರಡೂ ವಾರ್ಡ್ ಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಮೈತ್ರಿಪಕ್ಷದ ಅಭ್ಯರ್ಥಿಗಳನ್ನು ನಮ್ಮ ಅಭ್ಯರ್ಥಿಗಳನ್ನು ಸೋಲಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಬಿಬಿಎಂಪಿಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ಹಿರಿಯ ನಾಯಕ ಪದ್ಮನಾಭ ರೆಡ್ಡಿ.
ಬಿಬಿಎಪಿಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ 76 ಸ್ಥಾನಗಳನ್ನು ಗೆದ್ದು 15 ಸೀಟು ಪಡೆದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತು. ಏಳು ಸ್ವತಂತ್ರ ಅಭ್ಯರ್ಥಿಗಳು ಮೈತ್ರಿಪಕ್ಷಗಳಿಗೆ ಬೆಂಬಲ ಸೂಚಿಸಿ ಬಿಬಿಎಂಪಿಯಲ್ಲಿ ಅಧಿಕಾರ ನಡೆಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com