ಐಪಿಎಲ್ ಬೆಟ್ಟಿಂಗ್: ಬೆಂಗಳೂರಿನಲ್ಲಿ ಓರ್ವನ ಬಂಧನ, 70 ಲಕ್ಷ ರೂ. ವಶ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 70 ಲಕ್ಷ ರೂ ನಗದು ಹಾಗೂ ಎರಡು ಮೊಬೈಲ್ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 70 ಲಕ್ಷ ರೂ ನಗದು ಹಾಗೂ ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಚಾಂದ್ ಪಾಷಾ ಬಿನ್ ಸೈಯ್ಯದ್ ಅಜೀಜ್ (25) ಬಂಧಿತ ಆರೋಪಿ. ಕೋರಮಂಗಲದ 3 ನೇ ಬ್ಲಾಕ್ ಮನೆಯೊಂದರಲ್ಲಿ ಮೊಬೈಲ್ ಆ್ಯಪ್ ಬಳಸಿ ರವಿವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಚೈನ್ನೈ ಸೂಪರ್ ಕಿಂಗ್ ತಂಡಗಳ ನಡುವಿನ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದರು ಎಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಬಂಧಿತನಿಂದ 70,33,400 ರೂ. ನಗದು ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಮತ್ತೋರ್ವ ಬುಕ್ಕಿ ಸೈಯ್ಯದ್ ಇಲಿಯಾಜ್ ತಲೆಮರೆಸಿಕೊಂಡಿದ್ದು. ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 
ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಸ್. ಗಿರೀಶ್, ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್.ಹೆಚ್.ರಾಮಚಂದ್ರಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com