ಜೆಡಿಎಸ್ ನಾಯಕರ ವಿರುದ್ದ ಸಿದ್ದರಾಮಯ್ಯ ಗರಂ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು:  ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ 
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಜಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.
ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com