ಮೈಪರಚಿಕೊಳ್ಳುತ್ತಿರುವ ಕೈಲಾಗದವರ ಜತೆ ವಾದ ಇಲ್ಲ: ಸಿದ್ದರಾಮಯ್ಯ ಹೇಳಿದ್ದು ಯಾರಿಗೆ?

ತಮ್ಮ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಎಸ್ ನ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರಿಗೆ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡುತ್ತಿರುವ ಸಿದ್ದರಾಮಯ್ಯ ಈಗ ಮತ್ತೊಂದು ಟ್ವೀಟ್ ಮಾಡಿದ್ದಾರೆ.

Published: 13th May 2019 12:00 PM  |   Last Updated: 13th May 2019 04:56 AM   |  A+A-


Former CM Siddaramaiah

ಸಿದ್ದರಾಮಯ್ಯ

Posted By : SBV SBV
Source : Online Desk
ಬೆಂಗಳೂರು: ತಮ್ಮ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಎಸ್ ನ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರಿಗೆ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡುತ್ತಿರುವ ಸಿದ್ದರಾಮಯ್ಯ ಈಗ ಮತ್ತೊಂದು ಟ್ವೀಟ್ ಮಾಡಿದ್ದಾರೆ. 

ಈ ಬಾರಿ ವಿಶ್ವನಾಥ್ ಅವರ ಹೆಸರು ಹೇಳದೆಯೇ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೈಪರಚಿಕೊಳ್ಳುತ್ತಿರುವ ಕೈಲಾಗದವರ ಜತೆ ನನ್ನ ವಾದ ಇಲ್ಲ ಎಂದು ಹೇಳಿದ್ದಾರೆ. 
 
ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಎಂಬ ಹೆಮ್ಮೆ ನನ್ನದು. ಇದನ್ನು ಪುಸ್ತಕ ಮಾಡಿ ಹಂಚಿದ್ದೇನೆ, ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸದಾ ಸಿದ್ದ. ಮೈಪರಚಿಕೊಳ್ಳುತ್ತಿರುವ ಕೈಲಾಗದವರ ಜತೆ ನನ್ನ ವಾದ ಇಲ್ಲ.

ಒಳ್ಳೆಯ ಕೆಲಸ‌ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ,  ಇತಿಹಾಸ ಸ್ಮರಿಸುತ್ತದೆ. ದೇವರಾಜ ಅರಸು ಅವರ ಜನಪರ ಕೆಲಸಗಳನ್ನು ಮರೆತು ಜನ ಸೋಲಿಸಿದರು. ಅವರನ್ನು ಗುರುಗಳೆಂದು ಈಗ ಹೇಳುತ್ತಿರುವ ನಾಯಕರು ಕೂಡಾ ಬಿಟ್ಟು ಓಡಿಹೋಗಿದ್ದರು. ಆದರೆ ಅರಸು ಅವರನ್ನು ಈಗ ಇತಿಹಾಸ ಸ್ಮರಿಸುತ್ತಿದೆ. ಈರ್ಷ್ಯೆಗೆ ಕಾಲವೇ ಉತ್ತರ. ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp