ವಿದ್ಯಾರ್ಥಿಗಳೇ ಗಮನಿಸಿ! ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆ ದಿನ

ರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. 
"ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ ಗುರುವಾರವಷ್ಟೇ ತಿಳಿದಿತ್ತು. ಇದರಿಂದ ವಿದ್ಯಾರ್ಥಿಗೆ ಅನಾನುಕೂಲವಾಗದಿರಲೆಂದು ನಾವು ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮುಂದೂಡಲು ಕೇಳಿದೆವು" ಬೆಂಗಳುರಿನ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯರೊಬ್ಬರು ಹೇಳಿದ್ದಾರೆ. 
ಭವಿಷ್ಯದ ಶೈಕ್ಷಣಿಕ ಹಾಗೂ ಔದ್ಯೋಗಿಕ ಜೀವನಕ್ಕೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 40,000 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ  8.4 ಲಕ್ಷ  ವಿದ್ಯಾರ್ಥಿಗಳ ಪೈಕಿ 2.26 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ.ಇದರಲ್ಲಿ ಕೇವಲ  1.8 ಲಕ್ಷ ವಿದ್ಯಾರ್ಥಿಗಳು ಮಾತ್ರ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು  ಕೆಎಸ್ಇಇಬಿ ನಿರ್ದೇಶಕಿ ಸುಮಂಗಲಾ ಪತ್ರಿಕೆಗೆ ತಿಳಿಸಿದ್ದಾರೆ.
"ಉತ್ತರಪತ್ರಿಕೆ ಮರುಮೌಲ್ಯಮಾಪನ ದಿನಾಂಕಗಳಿಗೆ ಯಾವ ಬದಲಾವಣೆ ಮಾಡಲಾಗಿಲ್ಲ.ಜೂನ್ ನಲ್ಲಿ ಪೂರಕ ಪರೀಶ್ಖೆ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ನಿರ್ವಹಿಸಲಾಗಿದೆ." ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com