ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಹಿ ಗುರುತು

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.
ಸಿಎಸ್​ ಶಿವಳ್ಳಿ ಸಾವಿನಿಂದ ತೆರವಾಗಿದ್ದ ಕುಂದಗೋಳ ಹಾಗೂ ಉಮೇಶ್​ ಜಾಧವ್​ ರಾಜೀನಾಮೆಯಿಂದ ತೆರವಾಗಿದ್ದ ಚಿಂಚೋಳಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ನಾಳೆ ಮತದಾನ ನಡೆಯಲಿದೆ. ಇನ್ನು ಕಳೆದ ತಿಂಗಳು ನಡೆದಿದ್ದ ಲೋಕಸಭೆ ಚುನಾವಣೆಯ ವೇಳೆ ಮತದಾನ ಮಾಡಿದ್ದ ವ್ಯಕ್ತಿಗಳ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕಲು ಚುನಾವಣಾ ಆಯೋಗ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಕಳೆದ ತಿಂಗಳು ನಡೆದಿದ್ದ ಲೋಕಸಭಾ ಚುನಾವಣೆ ವೇಳೆ ಇಲ್ಲಿನ ಮತದಾರರಿಗೆ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗಿತ್ತು. ಈಗ ವಿಧಾನಸಭೆ ಉಪಚುನಾವಣೆಗೆ ಎಡಗೈ ಮಧ್ಯದ ಬೆರಳಿಗೆ ಅಳಿಸಲಸಾಧ್ಯವಾದ ಶಾಹಿಯನ್ನು ಹಾಕಲಾಗುತ್ತದೆ. ಇನ್ನು ಈ ಎರಡೂ ಕ್ಷೇತ್ರಗಳಲ್ಲಿ ಒಟ್ಟಾರೆ 1,016 ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.
ಅಪಾರ ಪ್ರಮಾಣದ ನಗದು, ಚಿನ್ನ, ಮದ್ಯ ವಶ
ಇದೇ ವೇಳೆ ಈ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಒಟ್ಟು 48.82 ಲಕ್ಷ ನಗದು ಹಣ, 82,715 ರೂ ಮೊತ್ತದ ಮದ್ಯ, 30 ಲಕ್ಷ ಮೌಲ್ಯದ 1.11 ಕಿಲೋ ಅಮೂಲ್ಯ ಲೋಹಗಳು ಸೇರಿ ಒಟ್ಟಾರೆ 79.64 ಲಕ್ಷ ಮೊತ್ತದ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com