'ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು'- ಸುಮಲತಾ ಅಂಬರೀಷ್

ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.

Published: 23rd May 2019 12:00 PM  |   Last Updated: 23rd May 2019 04:59 AM   |  A+A-


Casual Photo

ಸಾಂದರ್ಭಿಕ ಚಿತ್ರ

Posted By : ABN ABN
Source : Online Desk
ಮಂಡ್ಯ:  ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ  ಸುಮಲತಾ ಅಂಬರೀಶ್  ಒಂದು ಲಕ್ಷದ ಹದಿನೈದು ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುಮಲತಾ ಅವರ ಗೆಲುವಿನ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯಷ್ಟೆ ಬಾಕಿಯಿದೆ.

ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.

ಇದು ನನ್ನ ಗೆಲುವಲ್ಲ, ಅಂಬರೀಷ್ ಅವರ ಗೆಲುವು ಆಗಿದೆ. ನನ್ನ ಗೆಲುವಿಗೆ ಮಂಡ್ಯ ಜನತೆ ಮಾತ್ರವಲ್ಲದೆ ರಾಜ್ಯದ ಜನತೆಯೇ ಹಾರೈಸಿದ್ದಾರೆ ಎಂದು ಹೇಳಿದ್ದಾರೆ.

ತುಂಬಾ ದೊಡ್ಡ ಸಾಹಸ ಮಾಡಿದ್ದು, ಒಳ್ಳೇಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೆ. ಈ ಹಾದಿಯಲ್ಲಿ  ಚಿತ್ರೋದ್ಯಮದ ಗಣ್ಯರು, ರಾಜ್ಯದ ಜನತೆಯೇ ಬೆಂಬಲಿಸಿದ್ದು, ಅವರೆಲ್ಲರಿಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.

ಆರಂಭದಲ್ಲಿ ಹಿನ್ನೆಡೆಯಲ್ಲಿದ್ದರೂ ಮಧ್ಯಾಹ್ನದ ನಂತರ ಮುನ್ನಡೆ ಕಾಯ್ದುಕೊಂಡ ಸುಮಲತಾ ಅಂಬರೀಷ್ ಅವರಿಗೆ ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಸಿಕ್ಕಿದೆ.

ಮಂಡ್ಯ ಕ್ಷೇತ್ರದ ಪ್ರಗತಿ ಹಾಗೂ ಸಮಸ್ಯೆಗಳ ನಿವಾರಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸದ್ಯದಲ್ಲೇ ಜನರ ಮುಂದೆ ವಿವರಿಸಲಿದ್ದೇನೆ” ಎಂದು ಹೇಳಿದ್ದಾರೆ.
 

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp