2019ನೇ ಸಾಲಿನ ಸಿಇಟಿ ಫಲಿತಾಂಶ ನಾಳೆ ಪ್ರಕಟ

ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಲಿದೆ.
ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟವಾಗಲದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com