ನಿಖಿಲ್ ರಂಪಾಟ: ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಅವಾಸ್ತವಿಕ- ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನು...

Published: 25th May 2019 12:00 PM  |   Last Updated: 25th May 2019 01:21 AM   |  A+A-


CM H D Kumaraswamy and Nikhil Kumaraswamy

ಸಿಎಂ ಹೆಚ್ ಡಿ ಕುಮಾರಸ್ವಾಮಿ-ನಿಖಿಲ್ ಕುಮಾರಸ್ವಾಮಿ

Posted By : SUD SUD
Source : Online Desk
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನುಭವಿಸಿದ ಬೇಸರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಮೈಸೂರಿನ ಹೋಟೆಲ್​ ಒಂದರಲ್ಲಿ ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ ಶನಿವಾರ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಕಪೋಲಕಲ್ಪಿತ ಎಂದು ಸ್ವತಃ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ಲೀಟ್ ಮಾಡಿರುವ ಅವರು, ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ," ಎಂದಿದ್ದಾರೆ.

“ಚುನಾವಣೆಯಲ್ಲಿ ಸೋತ ನಂತರ ನಿಖಿಲ್​ ಮೈಸೂರಿನ ರ್ಯಾಡಿಸ್​​ ಬ್ಲೂ ಹೋಟೆಲ್​ನಲ್ಲಿ ತಂಗಿದ್ದರು. ಈ ವೇಳೆ ಸೋಲಿನ ಬೇಸರದಿಂದ ಚೆನ್ನಾಗಿ ಮದ್ಯ ಸೇವಿಸಿ ಜೋರಾಗಿ ಗಲಾಟೆ-ರಂಪಾಟ ಮಾಡಿದ್ದರು. ಈ ವೇಳೆ ಹೋಟೆಲ್​ ಮ್ಯಾನೇಜರ್​ ಹಾಗೂ ಸಿಬ್ಬಂದಿ ಎಷ್ಟೇ ಸಮಾಧಾನ ಪಡಿಸಿದರೂ ಅವರ ವಿರುದ್ಧವೂ ವಾಗ್ದಾಳಿ ನಡೆಸಿ ಗಲಾಟೆ ಮಾಡಿದ್ದರು.​ ಅಜ್ಜ ದೇವೇಗೌಡರ ವಿರುದ್ಧವೂ ಅವರು ಕೂಗಾಡಿದ್ದರು,” ಎಂದು ಕನ್ನಡ ದಿನಪತ್ರಿಕೆಯೊಂದು ವರದಿ ಪ್ರಕಟಿಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Stay up to date on all the latest ರಾಜ್ಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp