ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

Published: 26th May 2019 12:00 PM  |   Last Updated: 26th May 2019 02:47 AM   |  A+A-


Youth suspiciously dead at Belagav

ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

Posted By : RHN RHN
Source : Online Desk
ಬೆಳಗಾವಿ: ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಬೆಳಕು ಕಂಡ ಘಟನೆಯಲ್ಲಿ ಗೋಕಾಕ್​ ತಾಲೂಕಿನ ಅಡಿವೆಪ್ಪನ ಅಂಕಲಗಿ ಗ್ರಾಮದ ಶಿವಕುಮಾರ್​ ಬಲರಾಮ್​ ಉಪ್ಪಾರ (19)  ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಯುವಕನ ಶವ ದೊರಕಿದ್ದು ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.

ಹಿಂದೂಪರ ಸಂಘಟನೆಗಳ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಶಿವಕುಮಾರ್ ಅನೇಕ ಬಾರಿ ಗೋವುಗಳ ಕಳ್ಳಸಾಗಣೆಯನ್ನು ತಡೆದಿದ್ದ. ಹೀಗಾಗಿ ಗೋ ಸಾಗಣೆದಾರರೇ ಈತನನ್ನು ಕೊಂದು ಶಂಕೆ ವ್ಯಕ್ತವಾಗಬಾರದೆಂದು ಇಲ್ಲಿ ನೇಣಿಗೇರಿಸಿದ್ದಾರೆ ಎಂದು ಆತನ ಕುಟುಂಬಿಕರು, ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
Stay up to date on all the latest ರಾಜ್ಯ news with The Kannadaprabha App. Download now
facebook twitter whatsapp